ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ.
ಸ್ಥಳೀಯರ ಪ್ರಕಾರ, ಸ್ಫೋಟದ ತೀವ್ರತೆ ಎಷ್ಟು ದೊಡ್ಡದಾಗಿದೆ ಎಂದರೆ ಪಟಾಕಿ ಕಾರ್ಖಾನೆ ಬಳಿ ಇದ್ದ ನಾಲ್ಕು ಕಟ್ಟಡಗಳು ಸ್ಫೋಟದಲ್ಲಿ ನಾಶವಾಗಿವೆ.
ವಿಜಯ್ ಎಂಬುವವರ ಒಡೆತನದ ಕಾರ್ಖಾನೆಯಾಗಿದ್ದು, ನಗರದ ವೆಂಬಕೊಟ್ಟೈ ಪ್ರದೇಶದಲ್ಲಿತ್ತು. ಘಟನೆ ನಡೆದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ವರ್ಷ ರಾಜ್ಯದ ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು.
ಪ್ರಾಥಮಿಕ ತನಿಖೆಯಿಂದ ಕಾರ್ಖಾನೆಯ ರಾಸಾಯನಿಕ ಮಿಶ್ರಣ ಕೊಠಡಿಯಲ್ಲಿ ಸ್ಫೋಟ ಸಂಭವಿಸಿರುವುದಾಗಿ ಹೇಳಲಾಗಿದ್ದು ಹೆಚ್ಚಿನ ಮಾಹಿತಿ ಪೊಲೀಸರು ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ: Suhani Bhatnagar: ಔಷಧಿಯ ಅಡ್ಡ ಪರಿಣಾಮ; 19ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ʼದಂಗಲ್ʼ ನಟಿ