Advertisement

Temple Collapses: ವರುಣನ ಆರ್ಭಟ… ದೇವಸ್ಥಾನ ಕುಸಿದು 9 ಮೃತ್ಯು, ಹಲವರು ಸಿಲುಕಿರುವ ಶಂಕೆ

12:11 PM Aug 14, 2023 | Team Udayavani |

ಶಿಮ್ಲಾ: ಸೋಮವಾರ ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿರುವ ವರದಿಯಾಗಿದೆ.

Advertisement

ಸಮ್ಮರ್ ಹಿಲ್ ಪ್ರದೇಶದಲ್ಲಿರುವ ಶಿವ ದೇವಸ್ಥಾನದಲ್ಲಿ ಭೂಕುಸಿತ ಸಂಭವಿಸಿ ಹದಿನೈದಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸೋಮವಾರವಾದ ಹಿನ್ನೆಲೆಯಲ್ಲಿ ಶಿವನ ದೇವಸ್ಥಾನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ತಂಡದಿಂದ ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ.

ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ಈಗಾಗಲೇ ಮೇಘ ಸ್ಫೋಟ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ, ಈ ಘಟನೆಯಲ್ಲಿ ಐವರನ್ನು ರಕ್ಷಣೆ ಮಾಡಲಾಗಿದ್ದು ಓರ್ವ ಕಾಣೆಯಾಗಿದ್ದಾನೆ ಎನ್ನಲಾಗಿದೆ.

Advertisement

ಮುಖ್ಯಮಂತ್ರಿ ಭೇಟಿ
ಘಟನಾ ಸ್ಥಳಕ್ಕೆ ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ರಕ್ಷಣಾ ಕಾರ್ಯಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡುವಂತೆ ಸೂಚನೆ ನೀಡಿದ್ದಾರೆ ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Tumkur: ಸಿದ್ದಗಂಗಾ ಮಠದ ಕೃಷಿ ಹೊಂಡದಲ್ಲಿ ನೀರು ಪಾಲಾಗಿದ್ದ ಮತ್ತೆರಡು ಮೃತದೇಹ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next