ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿ ಶವ ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸೋಮವಾರ (ಜೂನ್ 20) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದೊಂದು ಸಾಮೂಹಿಕ ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನೂ ಓದಿ:ಭಾರತ ವಿರುದ್ಧದ ಟಿ20-ಏಕದಿನ ಸರಣಿಗೆ ಶ್ರೀಲಂಕಾ ವನಿತಾ ತಂಡ ಪ್ರಕಟ
ವಾಣಿಜ್ಯ ನಗರಿ ಮುಂಬೈನಿಂದ 350 ಕಿಲೋ ಮೀಟರ್ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮಾಯ್ಸಾಲ್ ಎಂಬ ಪ್ರದೇಶದಲ್ಲಿನ ಮನೆಯೊಂದರಲ್ಲಿ ಶವಗಳು ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.
ಮನೆಯೊಂದರಲ್ಲಿ ಒಂಬತ್ತು ಶವಗಳು ಪತ್ತೆಯಾಗಿದ್ದು, ಒಂದು ಸ್ಥಳದಲ್ಲಿ ಮೂರು ಶವ ಹಾಗೂ ಮನೆಯ ಇತರ ಸ್ಥಳದಲ್ಲಿ ಇನ್ನುಳಿದ ಆರು ಶವಗಳು ಪತ್ತೆಯಾಗಿರುವುದಾಗಿ ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೇಡಾಮ್ ತಿಳಿಸಿದ್ದಾರೆ.
Related Articles
ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ಸಾವಿನ ಹಿಂದಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ದೀಕ್ಷಿತ್ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಬಗ್ಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.