ನವದೆಹಲಿ: ಎಂಟು ಪಕ್ಷಗಳ ಒಂಭತ್ತು ನಾಯಕರು ಕೇಂದ್ರ ಸರ್ಕಾರ ರಾಜ್ಯಪಾಲರುಗಳನ್ನು ಮತ್ತು ಕೆಂದ್ರದ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.
ʻಕೆಂದ್ರದ ಸಂಸ್ಥೆಗಳನ್ನು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಬಳಸಿಕೊಳ್ಳಲಾಗುತ್ತಿದೆ. ಇದು ಪ್ರಜಾಪ್ರಭುತ್ವ ದೇಶವನ್ನು ನಿರಂಕುಶಪ್ರಭುತ್ವದತ್ತ ಕೊಂಡೊಯ್ಯಲಾಗುತ್ತಿದೆ ಎಂಬಂತೆ ಭಾಸವಾಗುತ್ತಿದೆʼಎಂದು ಪತ್ರದಲ್ಲಿ ಬರೆಯಲಾಗಿದೆ.
ಚುನಾವಣಾ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸುತ್ತಿರುವುದು ರಾಜಕೀಯ ದ್ವೇಷದಂತೆ ತೋರುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಅಲ್ಲದೇ ಈ ಪತ್ರಕ್ಕೆ ಬಿಆರ್‌ಎಸ್ ಪಕ್ಷದ ಅಧ್ಯಕ್ಷರಾದ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಜೆಕೆಎನ್‌ಸಿ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ , ಎಐಟಿಸಿ ನಾಯಕಿ ಮಮತಾ ಬ್ಯಾನರ್ಜಿ, ಎನ್‌ಸಿಪಿ ನಾಯಕ ಶರದ್ ಪವಾರ್, ಉದ್ಧವ್ ಠಾಕ್ರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್ , ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಹಿ ಹಾಕಿದ್ದಾರೆ.
ವಿಶೇಷವೇನೆಂದರೆ ಈ ಪತ್ರಕ್ಕೆ ಕಾಂಗ್ರೆಸ್, ಜೆಡಿಎಸ್, ಜೆಡಿಯು, ಸಿಪಿಯು, ಸಿಪಿಎಂ ಪಕ್ಷದ ಯಾವೊಬ್ಬ ನಾಯಕರೂ ಸಹಿ ಹಾಕಿಲ್ಲ.
ಆಪ್ ನಾಯಕ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನದಿಂದ ಕಂಗೆಟ್ಟಿರುವ ವಿಪಕ್ಷಗಳು ಈ ಪತ್ರದ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಜೊತೆಯಲ್ಲಿ ಈ ಮೊದಲು ಬೇರೆ ಪಕ್ಷದಲ್ಲಿದ್ದು ಈಗ ಬಿಜೆಪಿ ಜೊತೆಗಿರುವ ನಾಯಕರ ವಿರುದ್ಧದ ಪ್ರಕರಣಗಳು ಈಗ ನಿಧಾನವಾಗಿದ್ದಕ್ಕೆ ಕಾರಣವೇನು ಎಂದು ಪ್ರಶ್ನಿಸಿದೆ. ಪ್ರತಿ ಪಕ್ಷದ ನಾಯಕರ ಮೇಲಿನ ದಾಳಿಗಳ ಬಗ್ಗೆಯೂ ಈ ಪತ್ರದಲ್ಲಿ ನಮೂದಿಸಲಾಗಿದೆ.
ಇದ್ನನ್ನೂ ಓದಿ:
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು