Advertisement

ಪಿಲಿಕುಳದ 9 ವರ್ಷದ “ಓಲಿವರ್‌’ಹುಲಿ ಸಾವು

02:14 AM Jan 05, 2022 | Team Udayavani |

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷದ ಹುಲಿ “ಓಲಿವರ್‌’ ಸೋಮವಾರ ರಾತ್ರಿ ಮೃತಪಟ್ಟಿದೆ.

Advertisement

ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಚುರುಕಾಗಿದ್ದು ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದ್ದು, ತತ್‌ಕ್ಷಣವೇ ಮೃಗಾಲಯದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ.

ಈ ಹುಲಿಯು ಪಿಲಿಕುಳದ “ವಿಕ್ರಮ’ ಮತ್ತು ಶಾಂಭವಿ’ಗೆ ಜನಿಸಿದ ಎರಡು ಮರಿಗಳಲ್ಲಿ ಒಂದಾಗಿದೆ. ಪಿಲಿಕುಳದಲ್ಲಿ ಪ್ರಸ್ತುತ 12 ಹುಲಿಗಳು ಇವೆ.

ಕೊರೊನಾ ಪರೀಕ್ಷೆಗೆ ತೀರ್ಮಾನ
ಮೃತಪಟ್ಟ ಹುಲಿಯ ಅಂಗಾಂಗಗಳ ಮಾದರಿಯನ್ನು ಪರೀಕ್ಷೆಗಾಗಿ IAH – VB ಬೆಂಗಳೂರು ಮತ್ತು ಉತ್ತರ ಪ್ರದೇಶದ IIಗೆ ಕಳುಹಿಸಲಾಗಿದೆ. ಕೋವಿಡ್‌ ಪರೀಕ್ಷೆಗಾಗಿ ಮಾದರಿಯನ್ನು ಭೋಪಾಲದ NIHSADಗೆ ಕಳುಹಿಸಲಾಗಿದೆ.

ಮೃಗಾಲಯದಲ್ಲಿ ಅನುಮಾನಾಸ್ಪದವಾಗಿ ಯಾವುದೇ ರೋಗವು ಹರಡದಂತೆ ರೋಗ ನಿರೋಧಕ ದ್ರಾವಣವನ್ನು ಪ್ರಾಣಿಗಳ ಆವರಣದ ಒಳಗೆ ಮತ್ತು ಸುತ್ತ ಮುತ್ತ ಸಿಂಪಡಿಸಲಾಗುತ್ತಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್‌.ಜೆ. ಭಂಡಾರಿ ಉದಯವಾಣಿಗೆ ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ದೇಶದಲ್ಲಿ ಹೆಚ್ಚಲಿದೆ ಆನ್‌ಲೈನ್‌ ಖರೀದಿ : 2025ರ ವೇಳೆಗೆ ಶೇ.17ಕ್ಕೆ ಏರಿಕೆ ಸಾಧ್ಯತೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next