ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕು ಹಾಗೂ ಸಾವಿನ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕಳೆದ 24ಗಂಟೆಯಲ್ಲಿ 2,183 ಸೋಂಕು ಪ್ರಕರಣ ಪತ್ತೆಯಾಗಿದೆ. 214 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಏಪ್ರಿಲ್ 18) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬಹಿರ್ದೆಸೆಗೆ ಹೋದವರ ಮೇಲೆ ಕರಡಿ ದಾಳಿ; ನಾಲ್ವರು ಗಂಭೀರ
ಭಾನುವಾರ (ಏ.17) ದೇಶದಲ್ಲಿ 1,150 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ನಿನ್ನೆಗಿಂತ ಇಂದು ಶೇ.90ರಷ್ಟು ಕೋವಿಡ್ ಪ್ರಕರಣಗಳು ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 214 ಮಂದಿ ಸಾವನ್ನಪ್ಪಿದ್ದು, ಇದರಲ್ಲಿ ಕೇರಳದಲ್ಲಿ (ಬಾಕಿ ಉಳಿದ) ಸಾವನ್ನಪ್ಪಿರುವ 62 ಮಂದಿ ಅಂಕಿಅಂಶವೂ ಸೇರಿದೆ.
ದಿನಂಪ್ರತಿಯ ಪಾಸಿಟಿವಿಟಿ ದರ ಶೇ.0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,542ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ 517 ಕೋವಿಡ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಕೋವಿಡ್ ಪ್ರಕರಣದಲ್ಲಿ ಹೆಚ್ಚಳವಾಗತೊಡಗಿದೆ ಎಂದು ವರದಿ ತಿಳಿಸಿದೆ.