Advertisement

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 9 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

02:37 PM Jun 06, 2021 | Team Udayavani |

ಯಾದಗಿರಿ (ನಾರಾಯಣಪುರ): ಕಲ್ಯಾಣ ಕರ್ನಾಟಕದ ಬೃಹತ್ ನೀರಾವರಿ ಯೋಜನೆಯಾದ ಬಸವಸಾಗರ ಜಲಾಶಯದ ನಾಲ್ಕು ಕ್ರಸ್ಟಗೇಟ್ ಗಳಿಂದ ಆರು ಸಾವಿರ ಕ್ಯೂಸೆಕ್ ಹಾಗೂ ಮುರುಡೇಶ್ವರ ಜಲ ವಿದ್ಯುತ್ ಸ್ಥಾವರ ಮೂರು ಸಾವಿರ ಕ್ಯೂಸೆಕ್ ಒಟ್ಟು 9 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಶನಿವಾರ ರಾತ್ರಿಯಿಂದಲೆ ಕೃಷ್ಣಾ ನದಿ ಹರಿಬಿಡಲಾಗುತ್ತಿದೆ.

Advertisement

ಈ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಜನ ಜಾನುವಾರುಗಳು ನದಿಗೆ ಇಳಿಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದರು.

ಇದನ್ನೂ ಓದಿ:ಕೋವಿಡ್ ಸಮಯದಲ್ಲಿ ಮಕ್ಕಳಿಗೆ ಪತ್ರ ಬರೆದು ಯೋಗಕ್ಷೇಮ ವಿಚಾರಿಸುತ್ತಿದ್ದಾರೆ ಈ ಶಿಕ್ಷಕಿ

ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಕಳೆದ ನಾಲ್ಕೈದು ದಿನಗಳಿಂದ ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯುತಿದ್ದು ಹಾಗೂ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದಲು ಒಳಹರಿವು ಬರುತಿದೆ. ಹೀಗಾಗಿ ಕುಡಿಯುವ ನೀರು ಪೂರೈಕೆಗೆ ಬೇಕಾಗುವಷ್ಟು ಹಾಗೂ ಉದ್ಯಮಿಗಳಿಗೆ ವಾರ್ಷಿಕ ಬೇಡಿಕೆಗೆ ಬೇಕಾಗುವಷ್ಟು ನೀರಿನ ಸಂಗ್ರಹ ಮಟ್ಟವನ್ನು ಕಾಯ್ದುಕೊಂಡು ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next