Advertisement
ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರು ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಜತೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್, ದಿಲ್ಲಿ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ್, ಝಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಸಹಿತ ರಾಷ್ಟ್ರ ಮಟ್ಟದ ಅನೇಕ ನಾಯಕರು ಶುಭ ಹೇಳಿದ್ದಾರೆ.
ಬೆಳಗ್ಗೆಯೇ ಮಾಜಿ ಪ್ರಧಾನಿಗಳ ನಿವಾಸದಲ್ಲಿ ಮಕ್ಕಳು, ಮೊಮ್ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಂದೆಗೆ ಶುಭ ಕೋರಿ ಆಶೀರ್ವಾದ ಪಡೆದರು. ದೇವೇಗೌಡರಿಗೆ ಪಕ್ಷದ ನಾಯಕರು ಹಾಗೂ ಮುಖಂಡರು ಶುಭಾಶಯ ಕೋರುವ ಜತೆಗೆ ಆಸ್ಪತ್ರೆಗಳಲ್ಲಿ ಹಣ್ಣು-ಹಂಪಲು ವಿತರಣೆ, ರಕ್ತದಾನ ಶಿಬಿರ ಸಹ ಆಯೋಜಿಸಿದ್ದರು. ಇದಕ್ಕೂ ಮುನ್ನ ದೇವೇಗೌಡರು ಜೆಪಿ ನಗರದ ತಿರುಮಲಗಿರಿ ವೆಂಕಟರಮಣ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
Related Articles
ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಅರ್ ಅಶೋಕ್, ಗೋವಿಂದ ಕಾರಜೋಳ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಉಪಸ್ಥಿತರಿದ್ದರು.
Advertisement
ಧನ್ಯವಾದ ಹೇಳಿದ ದೇವೇಗೌಡತಮ್ಮ ಜನ್ಮದಿನಕ್ಕೆ ಶುಭ ಹಾರೈಸಿದ ಎಲ್ಲ ನಾಯಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಮಾಜಿ ಪ್ರಧಾನಿ ದೇವೇಗೌಡರು ಧನ್ಯವಾದಗಳನ್ನು ತಿಳಿಸಿದ್ದಾರೆ. ರಾಷ್ಟ್ರ ಹಾಗೂ ರಾಜ್ಯದ ಅನೇಕ ನಾಯಕರು ಶುಭ ಕೋರಿದ್ದಾರೆ. ಅಸಂಖ್ಯಾಕ ಕಾರ್ಯ
ಕರ್ತರು, ಕೋಟ್ಯಂತರ ಸಾರ್ವಜನಿಕ ಬಂಧುಗಳು ಪ್ರೀತಿ ತೋರಿಸಿದ್ದಾರೆ. ಎಲ್ಲರಿಗೂ ನನ್ನ ಅನಂತ ಧನ್ಯವಾದಗಳು ಎಂದು ಹೇಳಿದ್ದಾರೆ.