ನವದೆಹಲಿ: ಸಾಧನೆಗೆ ವಯಸ್ಸು ಅಡ್ಡಿಯಲ್ಲ ಅದಕ್ಕೆ ಕೇವಲ ಛಲ, ಬಲ ಗುರಿ ಇರಬೇಕು ಎಂಬ ಮಾತನ್ನು ಭಾರತ ಮೂಲದ ಭಗವಾನಿ ದೇವಿ, ನಿರೂಪಿಸಿದ್ದಾರೆ.
ಭಾರತದ ಭಗವಾನಿ ದೇವಿ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ರಲ್ಲಿ 94 ನೇ ವಯಸ್ಸಿನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ.
ಫಿನ್‌ಲ್ಯಾಂಡ್‌ನ ಟಂಪರೆಯಲ್ಲಿ ನಡೆದ 100 ಮೀಟರ್ ಸ್ಪ್ರಿಂಟ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ 24.74 ಸೆಕೆಂಡುಗಳಲ್ಲಿ ಓಡಿ ಚಿನ್ನ ಗೆದ್ದಿದ್ದಾರೆ. ಚಿನ್ನದ ಜತೆಗೆ, ಅವರು ಶಾಟ್‌ಪುಟ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಕಾರ್ಕಳ: ಬೋಳ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು; ಪಂಚಲೋಹದ ಬಲಿಮೂರ್ತಿ ಕಳವು
ಭಗವಾನಿ ದೇವಿ ಈ ಹಿಂದೆ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ, 94 ವರ್ಷದ ಅವರು ಫಿನ್‌ಲ್ಯಾಂಡ್‌ನಲ್ಲಿ 2022 ರ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದರು. ರಾಷ್ಟ್ರೀಯ ಮಾಸ್ಟರ್ಸ್‌ನಲ್ಲಿ ಪದಕಗಳನ್ನು ಗೆಲ್ಲುವ ಮೊದಲು, ದೇವಿ ಅವರು ದೆಹಲಿ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 100 ಮೀಟರ್ ಓಟ, ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತದಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದರು.