ಬೆಂಗಳೂರು: ಉಡುಪಿ, ಕೊಡಗು ಜಿಲ್ಲೆಗಳಿಗೆ 95 ಕೋ.ರೂ. ಸಹಿತ ಒಟ್ಟು ಏಳು ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಮುಖ್ಯ ಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿ 705 ಕೋ. ರೂ. ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ದೊರಕಿದೆ.
ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಜರಗಿದ ಸಭೆಯಲ್ಲಿ ಉಡುಪಿ, ಕೊಡಗು, ಮೈಸೂರು, ರಾಮನಗರ, ಬಳ್ಳಾರಿ, ದಾವಣಗೆರೆ ಹಾಗೂ ಬೆಳಗಾವಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿಗಳಿಗಾಗಿ 2022- 23 ರಿಂದ 2024-25ನೇ ಸಾಲಿನ ಮುಖ್ಯಮಂತ್ರಿ ಅಮೃತ ನಗರೋತ್ಥಾನ ನಾಲ್ಕನೇ ಹಂತ ಯೋಜನೆಗೆ ಒಪ್ಪಿಗೆ ನೀಡಲಾಯಿತು.
ಇದನ್ನೂ ಓದಿ:ಒಡಿಶಾದ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಪುರಿ ಜಗನ್ನಾಥ ದೇಗುಲದ ಒಲೆ ಧ್ವಂಸ ; ಆರೋಪಿ ಬಂಧನ
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ ನಗರೋತ್ಥಾನ ಯೋಜನೆ 4ನೇ ಹಂತದ 3ನೇ ಸಮಿತಿ ಮತ್ತು ನಗರೋತ್ಥಾನ 3ನೇ ಹಂತದ ಯೋಜನೆಗಳ 18ನೇ ರಾಜ್ಯ ಮಟ್ಟದ ಸಮಿತಿಯ ಸಭೆ ನಡೆಸಿ 705 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾವಾರು ಮೊತ್ತ (ಕೋ.ರೂ.)
ಮೈಸೂರು – 75, ಬಳ್ಳಾರಿ – 80, ರಾಮನಗರ-125, ದಾವಣಗೆರೆ-70, ಬೆಳಗಾವಿ-260 ಕೋ. ರೂ..