ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 45 ಲಕ್ಷ ಸನಿಹ ತಲುಪಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 95,735 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಆತಂಕ ಮೂಡಿಸಿದೆ.
ಇದೇ ಅವಧಿಯಲ್ಲಿ ದೇಶದಲ್ಲಿ 1,172 ಸೋಂಕಿತರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇದರಿಂದ ದೇಶದ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ 75,062ಕ್ಕೆ ಏರಿಕೆಯಾಗಿದೆ.
ದೇಶದ ಕೋವಿಡ್-19 ಸೋಂಕಿತರ ಸಂಖ್ಯೆ 44,65,864ಕ್ಕೆ ಏರಿಕೆಯಾಗಿದೆ. ಇದರಲ್ಲಿ 9,19,018 ಸಕ್ರಿಯ ಪ್ರಕರಣಗಳಿವೆ.
ಬುಧವಾರ ದೇಶದಲ್ಲಿ 11,29,756 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 95,735 ಪಾಸಿಟಿವ್ ವರದಿಯಾಗಿದೆ. ದೇಶದಲ್ಲಿ ಇದುವರೆಗೆ ಒಟ್ಟು 5,29,34,433 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ.
ಬುಧವಾರ ರಾಜ್ಯದಲ್ಲಿ 70,322 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 9540 ಮಂದಿಗೆ ಕೋವಿಡ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. 128 ಮಂದಿ ಮೃತಪಟ್ಟಿದ್ದು, 6860 ಮಂದಿ ಗುಣಮುಖರಾಗಿದ್ದಾರೆ.