Advertisement

ಗೌರವಧನ ಹೆಚ್ಚಳಕ್ಕೆ 98 ಕೋಟಿ ರೂ. ಬಿಡುಗಡೆ

11:23 PM Oct 25, 2019 | Lakshmi GovindaRaju |

ಬೆಂಗಳೂರು: ರಾಜ್ಯದಲ್ಲಿ ಸುಮಾರು 1,28,491 ಅಂಗನವಾಡಿ ಕಾರ್ಯಕರ್ತೆ ಯರು, ಮಿನಿ ಅಂಗನವಾಡಿ ಕಾರ್ಯಕರ್ತೆ ಯರು ಹಾಗೂ ಸಹಾಯಕಿಯರು ಕಾರ್ಯ ನಿರ್ವಹಿಸುತ್ತಿದ್ದು, ಗೌರವಧನ ಹೆಚ್ಚಳಕ್ಕಾಗಿ ಒಟ್ಟು 98.30 ಕೋಟಿ ರೂ.ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Advertisement

ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿ ಇದ್ದ ಕಾರಣ ಸಮಸ್ಯೆಯಾಗಿದೆ. ಇದೇ ಕಾರಣಕ್ಕಾಗಿ ಆಡಳಿತ ಸುಧಾರಣೆಗೆ ಇಲಾಖೆಯಿಂದ ಒತ್ತು ನೀಡ ಲಾಗುತ್ತಿದ್ದು, 48 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ನೇಮಿಸಿ, ಸ್ಥಳ ನಿಯುಕ್ತಿಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. 33 ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ನೇಮಿಸಿಕೊಳ್ಳಲಾಗಿದ್ದು, ಇವರಿಗೂ ಸ್ಥಳ ನಿಯುಕ್ತಿಗೊಳಿಸಲಾಗುತ್ತಿದೆ.

ಈಗಾಗಲೇ 628 ಮಹಿಳಾ ಮೇಲ್ವಿಚಾರಕಿಯರಿಗೆ ಸ್ಥಳ ನಿಯುಕ್ತಿಗೊಳಿಸಲು ಕ್ರಮ ವಹಿಸಲಾಗುತ್ತಿದೆ. ಇದರಲ್ಲಿ 374 ಮೇಲ್ವಿಚಾರಕರಿಗೆ ತರಬೇತಿ ಪೂರ್ಣಗೊಂಡಿದ್ದು, ಬಾಕಿ 254 ಮೇಲ್ವಿಚಾರಕರಿಗೆ ತರಬೇತಿ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು. ಅಧಿಕಾರಿಗಳಿಗೆ ಮುಂಬಡ್ತಿ: ಐದು ವಿವಿಧ ವೃಂದದ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ, ಇಲಾಖೆಯಿಂದ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ.

104 ಅಧಿಕಾರಿಗಳಿಗೆ ಮುಂಬಡ್ತಿ ಸಲುವಾಗಿ ಇಲಾಖಾ ಮುಂಬಡ್ತಿ ಸಮಿತಿಯಿಂದ ಡಿಪಿಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸ್ಥಳ ನಿಯುಕ್ತಿ ಬಾಕಿಯಿದೆ. ಇನ್ನೂ 80 ವಿವಿಧ ಹಂತದ ಅಧಿಕಾರಿಗಳಿಗೆ ಮುಂಬಡ್ತಿ ಸಂಬಂಧ ಡಿಪಿಸಿ ಪ್ರಕ್ರಿಯೆ ಪ್ರಾರಂಭಿಸಿದ್ದು, ಶೀಘ್ರದಲ್ಲಿಯೇ ಪದೋನ್ನತಿ ನೀಡಲಾಗುವುದು ಎಂದು ವಿವರಿಸಿದರು. 1000 ಅಂಗನವಾಡಿ ಕೇಂದ್ರಗಳ ದುರಸ್ಥಿಗೆ 10 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next