Advertisement

ಶೇ. 98 ಸೋಂಕಿತರಲ್ಲಿ ರೋಗ ಲಕ್ಷಣವಿಲ್ಲ

10:17 AM Jun 04, 2020 | mahesh |

ಉಡುಪಿ: ಜಿಲ್ಲೆಯಲ್ಲಿ ಕಂಡು ಬಂದ ಕೋವಿಡ್ ಪ್ರಕರಣಗಳಲ್ಲಿ ಶೇ. 98 ಅಂದರೆ ಸುಮಾರು 400 ಮಂದಿಗೆ ರೋಗ ಲಕ್ಷಣಗಳಿಲ್ಲ ಎಂದು ಜಿಲ್ಲಾ ನೋಡಲ್‌ ಅಧಿಕಾರಿ ಡಾ|ಪ್ರಶಾಂತ ಭಟ್‌ ಅವರು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಕೋವಿಡ್ ಉಸ್ತುವಾರಿಗಳಲ್ಲಿ ಒಬ್ಬರಾದ ಡಾ| ಕೆ. ಸುಧಾಕರ್‌ ಅವರಿಗೆ ಮಾಹಿತಿ ನೀಡಿದರು.

Advertisement

ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯನ್ನು ಡಾ| ಸು ಧಾಕರ್‌ ನಡೆಸಿಕೊಟ್ಟರು. ಜಿಲ್ಲೆಯಲ್ಲಿ ಇದುವರೆಗೆ 13,542 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲೆಗೆ ಮೇ ತಿಂಗಳಲ್ಲಿ 8,624 ಮಂದಿ ಆಗಮಿಸಿದ್ದು, ಅದರಲ್ಲಿ 152 ಮಂದಿ ವಿದೇಶದಿಂದ ಮತ್ತು 8,472 ಮಂದಿ ಇತರ ರಾಜ್ಯ ಗಳಿಂದ ಆಗಮಿಸಿದವರು. 7,697 ಮಂದಿ ಮಹಾರಾಷ್ಟ್ರವೊಂದರಿಂದಲೇ ಬಂದಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ 539 ಮಂದಿಗೆ ಪರೀಕ್ಷೆ ಮಾಡ ಲಾಗಿದೆ. ಇದುವರೆಗೆ 12,504 ಮಾದರಿ ಸಂಗ್ರಹಿಸಲಾಗಿದೆ. ಒಟ್ಟು 410 ಪಾಸಿಟಿವ್‌ ಪ್ರಕರಣ ಕಂಡು ಬಂದಿವೆ. 64 ಮಂದಿ ಬಿಡುಗಡೆಯಾಗಿದ್ದು, 345 ಸಕ್ರಿಯ ಪ್ರಕರಣ ಗಳಿವೆ, ಒಂದು ಸಾವು ಸಂಭವಿಸಿದೆ. ಒಟ್ಟು 63 ಕಂಟೈನ್ಮೆಂಟ್‌ ಝೋನ್‌ ರಚಿಸಲಾಗಿದೆ, ಪ್ರಸ್ತುತ 61 ಝೋನ್‌ಗಳಿವೆ ಎಂದು ಡಾ| ಪ್ರಶಾಂತ್‌ ಭಟ್‌ ತಿಳಿಸಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನೂತನ ಕೋವಿಡ್‌ 19 ಪರೀಕ್ಷಾ ಲ್ಯಾಬ್‌ ನಿರ್ಮಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. 10 ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು
ಡಾ| ಸುಧಾಕರ್‌ ತಿಳಿಸಿದರು. ಈ ಅವಧಿಯಲ್ಲಿ ಎಲ್ಲ ಖಾಸಗಿ ನರ್ಸಿಂಗ್‌ ಹೋಮ್‌ ಮತ್ತು ಕ್ಲಿನಿಕ್‌ಗಳು ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡುತ್ತಿರುವ ಬಗ್ಗೆ ಪರಿಶೀಲಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನೀಲ್‌ ಕುಮಾರ್‌, ರಘುಪತಿ ಭಟ್‌, ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್‌, ಜಿ.ಪಂ. ಸಿಇಒ ಪ್ರೀತಿ ಗೆಹಲೋತ್‌, ಡಿಎಚ್‌ಒ ಡಾ| ಸುಧೀರ್‌ಚಂದ್ರ ಸೂಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next