Advertisement
ಪ್ರಧಾನಿ ಮೋದಿ ಆಗಮನಕ್ಕೆ ರಾಜ್ಯ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಳ್ಳುತ್ತಿದೆ. ಎಲ್ಲೆಲ್ಲಿ ಪ್ರಚಾರ ಸಭೆ ಆಯೋಜಿಸಬೇಕು, ರ್ಯಾಲಿ ಮಾಡುವುದಾದರೆ ಹೇಗೆ?
ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿರುವುದನ್ನು ಪ್ರತಿಪಾದಿಸುವ ಸಲುವಾಗಿ ಪ್ರತೀ ಕಾರ್ಯಕ್ರಮದ ವೇದಿಕೆಯಲ್ಲೂ ಪ್ರಧಾನಿಯ ಜತೆಗೆ ಮಹಿಳೆಯರಿಗೂ ಹೆಚ್ಚಿನ ಪ್ರಾತಿನಿಧ್ಯ ಕೊಡುವ ಚಿಂತನೆಗಳು ನಡೆದಿವೆ. ರೋಡ್ ಶೋ ಆದರೆ ಸ್ಥಳೀಯ ಅಭ್ಯರ್ಥಿಗೆ ಮಾತ್ರ ಸ್ಥಾನ ಇರಲಿದ್ದು, ಆವಶ್ಯಕತೆ ಬಿದ್ದರಷ್ಟೇ ಹೆಚ್ಚುವರಿಯಾಗಿ ಒಬ್ಬರೇ ಒಬ್ಬ ನಾಯಕರಿಗೆ ಮಾತ್ರ ಸ್ಥಾನ ಕಲ್ಪಿಸುವ ಚರ್ಚೆಗಳಾಗಿವೆ.
Related Articles
ಮಂಗಳೂರು: ಮೋದಿ ಎ. 14ರಂದು ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ನಗರದಲ್ಲಿ ನಡೆಯಲಿರುವ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಪಾಲ್ಗೊಳ್ಳುವ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಎ. 14ರಂದು ಅಪರಾಹ್ನ ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸುವ ಬಗ್ಗೆ ತೀರ್ಮಾನ ಆಗಿದೆ. ಸಮಾವೇಶ ಎಲ್ಲಿ ನಡೆಯಲಿದೆ ಎಂಬುದನ್ನು ಸೋಮವಾರ ಅಂತಿಮಗೊಳಿಸಲಾಗುವುದು ಎಂದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿಯೂ ಪ್ರಧಾನಿ ಪ್ರಚಾರ ಕಾರ್ಯ ಕೈಗೊಳ್ಳುವ ಸಾಧ್ಯತೆ ಇದೆ.
Advertisement