Advertisement

ಎ.14: ರಾಜ್ಯದಲ್ಲಿ ಮೋದಿ ಪ್ರಚಾರ; ಬೆಂಗಳೂರು ಉತ್ತರದಲ್ಲಿ 2 ಕಿ.ಮೀ. ರೋಡ್‌ ಶೋ

01:09 AM Apr 08, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಕಣ ರಂಗೇರುತ್ತಿದ್ದು ಪ್ರಮುಖ ರಾಜಕೀಯ ಪಕ್ಷಗಳ ರಾಷ್ಟ್ರೀಯ ನಾಯಕರು ಅಖಾಡಕ್ಕೆ ಧುಮುಕಿದ್ದಾರೆ. ಈಗಾಗಲೇ ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಯವರು ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಜನ್ಮದಿನವಾಗಿರುವ ಎ. 14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

Advertisement

ಪ್ರಧಾನಿ ಮೋದಿ ಆಗಮನಕ್ಕೆ ರಾಜ್ಯ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಳ್ಳುತ್ತಿದೆ. ಎಲ್ಲೆಲ್ಲಿ ಪ್ರಚಾರ ಸಭೆ ಆಯೋಜಿಸಬೇಕು, ರ್ಯಾಲಿ ಮಾಡುವುದಾದರೆ ಹೇಗೆ?

ರೋಡ್‌ ಶೋ ಆದರೆ ಎಲ್ಲಿಂದ ಎಲ್ಲಿಯ ವರೆಗೆ ಎಂಬ ಚರ್ಚೆ ಬಿಜೆಪಿ ನಾಯಕರಲ್ಲಿ ನಡೆದಿದ್ದು, ಶೀಘ್ರವೇ ಕಾರ್ಯಕ್ರಮದ ನೀಲನಕ್ಷೆ ಸಿದ್ಧಗೊಳ್ಳಲಿದೆ.

ವೇದಿಕೆಯಲ್ಲಿ ಮಹಿಳೆಯರಿಗೆ ಮಣೆ?
ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿರುವುದನ್ನು ಪ್ರತಿಪಾದಿಸುವ ಸಲುವಾಗಿ ಪ್ರತೀ ಕಾರ್ಯಕ್ರಮದ ವೇದಿಕೆಯಲ್ಲೂ ಪ್ರಧಾನಿಯ ಜತೆಗೆ ಮಹಿಳೆಯರಿಗೂ ಹೆಚ್ಚಿನ ಪ್ರಾತಿನಿಧ್ಯ ಕೊಡುವ ಚಿಂತನೆಗಳು ನಡೆದಿವೆ. ರೋಡ್‌ ಶೋ ಆದರೆ ಸ್ಥಳೀಯ ಅಭ್ಯರ್ಥಿಗೆ ಮಾತ್ರ ಸ್ಥಾನ ಇರಲಿದ್ದು, ಆವಶ್ಯಕತೆ ಬಿದ್ದರಷ್ಟೇ ಹೆಚ್ಚುವರಿಯಾಗಿ ಒಬ್ಬರೇ ಒಬ್ಬ ನಾಯಕರಿಗೆ ಮಾತ್ರ ಸ್ಥಾನ ಕಲ್ಪಿಸುವ ಚರ್ಚೆಗಳಾಗಿವೆ.

ಮಂಗಳೂರಿನಲ್ಲೂ ಪ್ರಚಾರ?
ಮಂಗಳೂರು: ಮೋದಿ ಎ. 14ರಂದು ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ನಗರದಲ್ಲಿ ನಡೆಯಲಿರುವ ಬಿಜೆಪಿಯ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ಪಾಲ್ಗೊಳ್ಳುವ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಎ. 14ರಂದು ಅಪರಾಹ್ನ ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸುವ ಬಗ್ಗೆ ತೀರ್ಮಾನ ಆಗಿದೆ. ಸಮಾವೇಶ ಎಲ್ಲಿ ನಡೆಯಲಿದೆ ಎಂಬುದನ್ನು ಸೋಮವಾರ ಅಂತಿಮಗೊಳಿಸಲಾಗುವುದು ಎಂದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿಯೂ ಪ್ರಧಾನಿ ಪ್ರಚಾರ ಕಾರ್ಯ ಕೈಗೊಳ್ಳುವ ಸಾಧ್ಯತೆ ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next