Advertisement

Teacher: ಅ. 21: ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌

11:12 PM Oct 18, 2023 | Team Udayavani |

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 13,552 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು ಅ. 21 (ಶನಿವಾರ) ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌ ನಡೆಸಲಿದೆ.

Advertisement

ಮಾ. 8ರಂದು ಪ್ರಕಟಿಸಲಾಗಿರುವ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸೆಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರವನ್ನು ಅ.19 (ಗುರುವಾರ)ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಪಟ್ಟಿಯಲ್ಲಿರುವ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌ ಶನಿವಾರ ಬೆಳಗ್ಗೆ 10.30ಕ್ಕೆ ಆಯಾ ಜಿಲ್ಲೆಗಳ ನೇಮಕಾತಿ ಪ್ರಾಧಿಕಾರಿಯಾದ ಜಿಲ್ಲಾ ಉಪ ನಿರ್ದೇಶಕರು (ಆಡಳಿತ) ಕಚೇರಿಯಲ್ಲಿ ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನಲ್ಲಿರುವ ಎಲ್ಲ ಅಗತ್ಯ ವಿವರಗಳನ್ನು ಪಡೆದು ಸಕಾಲದಲ್ಲಿ ಕೌನ್ಸೆಲಿಂಗ್‌ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ದಾಖಲೆಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಉಪನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next