Advertisement
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಗಣ್ಣೇಗೌಡ, ದೌರ್ಜನ್ಯಕ್ಕೆ ಒಳಗಾದ ಬಾಲಕಿ ಹಾಗೂ ಅವರ ಕುಟುಂಬ ದವರಿಗೆ ಸಾಂತ್ವನ ಹೇಳಿದ್ದೇನೆ. ಬಾಲಕಿಯನ್ನು ಕಾನೂನು, ವೈದ್ಯಕೀಯ, ಸಮಾಲೋಚನೆ, ಆಹಾರ, ತಂಗಲು ವ್ಯವಸ್ಥೆ ಸೇರಿ ಒಂದು ಸೂರಿನಲ್ಲಿ ತಕ್ಷಣಕ್ಕೆ ಸ್ಪಂದಿಸುವ ಎಲ್ಲಾ ರೀತಿಯ ವ್ಯವಸ್ಥೆ ಇರುವ ಸಖೀ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
Related Articles
Advertisement
ಚೆಲುವಾಂಬ ಆಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ರಾಜೇಂದ್ರಕುಮಾರ್, ಸಖೀ ಒಎಸ್ ಸೆಂಟರ್ ಆಡ ಳಿತಾಧಿಕಾರಿ ಸುಚಿತ್ರಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರ ಕುಮಾರ್, ಸಾಮಾಜ ಕಾರ್ಯಕರ್ತ ಬಿ.ಭಾಸ್ಕರ್, ಕೆಆರ್ ಎಸ್ ಠಾಣಾಧಿಕಾರಿ, ಇತರರು ಇದ್ದರು.
ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ:
ಮೈಸೂರು: ಕೆಆರ್‌ಎಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸೋಮವಾರ ಮಧ್ಯಾಹ್ನ 59 ವರ್ಷದ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ. ಕುಟುಂಬದವರು ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸದ್ದಾರೆ.
ಆರೋಪಿಯು ತನ್ನ ಮನೆಯ ಪಕ್ಕದಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಮನೆಯಲ್ಲಿ ಬಾಲಕಿ ಕಾಣದಿರುವುದನ್ನು ಕಂಡು ತಾಯಿ ಹುಡುಕಾಡಿದಾಗ ಆರೋಪಿ ಮನೆಯಲ್ಲಿ ಬಾಲಕಿ ಚೀರಿಕೊಂಡ ಶಬ್ದ ಕೇಳಿಬಂದಿದೆ.
ಕೂಡಲೇ ಸ್ಥಳೀಯರ ನೆರವಿನಿಂದ ಬಾಗಿಲು ಒಡೆದು ಒಳಹೋಗಿ ನೋಡಿದಾಗ ಬಾಲಕಿ ಬಿಟ್ಟು ಆರೋಪಿ ಪರಾರಿಯಾಗಿದ್ದ. ಕೂಡಲೇ ಪಾಲಕರು ಪೊಲೀಸರಿಗೆ ದೂರು ನೀಡಿದ್ದರು.
ಮೈಸೂರು ಜಿಲ್ಲೆಯಲ್ಲಿ 10 ದಿನಗಳಲ್ಲಿ 10 ಪ್ರಕರಣ: ಮೈಸೂರು ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಲ್ಲಿ 10 ಪೋಕೊÕà ಪ್ರಕರಣ ದಾಖಲಾಗಿವೆ. ಇದು ಆತಂಕಕಾರಿ ಬೆಳವಣಿಗೆ.
ಚೆಲುವಾಂಬ ಆಸ್ಪತ್ರೆ ಆವರಣದಲ್ಲಿರುವ ಸಖೀ ವಿಭಾಗದಲ್ಲಿ 10 ಪ್ರಕರಣ ವರದಿಯಾಗಿದೆ. ಸಂತ್ರಸ್ತೆಯರಿಗೆ ಚಿಕಿತ್ಸೆ ಮತ್ತು ಆರೈಕೆ ಮಾಡಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣೇಗೌಡ ಹೇಳಿದರು.
ಈ ಹಿಂದೆ ಪೋಕೊÕà ಪ್ರಕರಣಗಳು ಬೆಳಕಿಗೆ ಬರುತ್ತಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಮಾಧ್ಯಮದ ಮೂಲಕ ಮತ್ತು ಸಾಮಾಜಿಕ ಜಾಲತಾಣದ ಮೂಲಕ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಂತಹ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆಯಿಂದ ಕೇಸ್ ದಾಖಲಿಸಿ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ. ಜತೆಗೆ ಸಂತ್ರಸ್ತ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೆರವು ನೀಡ ಲಾಗುತ್ತಿದೆ ಎಂದು ತಿಳಿಸಿದರು.