ಚೆನ್ನೈ: ಕಮಲ್ ಹಸನ್ ಆಪ್ತ, ಮಕ್ಕಳ್ ನಿಧಿ ಮಯ್ಯಮ್ ಪಕ್ಷದ ನಾಯಕ ಎ.ಅರುಣಾಚಲಂ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಕೇಂದ್ರ ಸಚಿವ, ಬಿಜೆಪಿ ನಾಯಕ ಪ್ರಕಾಶ್ ಜಾವ್ಢೇಕರ್ ಸಮ್ಮುಖದಲ್ಲಿ ಚೆನ್ನೈನಲ್ಲಿ ಎ.ಅರುಣಾಚಲಂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಕಮಲ್ ಹಸನ್ ಅವರ ಮಕ್ಕಳ್ ನಿಧಿ ಮಯ್ಯಮ್ ಪಕ್ಷದಲ್ಲಿ ಪ್ರಮುಖರಾಗಿದ್ದ ಎ. ಅರುಣಾಚಲಂ ಅವರ ಬಿಜೆಪಿ ಸೇರ್ಪಡೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಇದನ್ನೂ ಓದಿ:ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ: ಸದೈವ್ ಅಟಲ್ ಸ್ಮಾರಕಕ್ಕೆ ಗಣ್ಯರ ಭೇಟಿ, ಗೌರವ
Related Articles
ಮುಂದಿನ ವರ್ಷದ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ದಕ್ಷಿಣದ ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ಅಣ್ಣಾಮಲೈ, ಖುಷ್ಬೂ ಸುಂದರ್ ಸೇರಿದಂತೆ ಹಲವು ಪ್ರಮುಖರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.