Advertisement
ಪ್ರಸ್ತುತ ಸಿ ಮತ್ತು ಡಿ ಗ್ರೂಪ್ ಹುದ್ದೆಗಳಿಗೆ ಸಂದರ್ಶನವಿಲ್ಲದೆ ನೇಮಕ ಮಾಡಿಕೊಳ್ಳುತ್ತಿರುವಂತೆ ಇನ್ನು ಮುಂದೆ ಎ ಮತ್ತು ಬಿ ಹುದ್ದೆಗಳಿಗೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿ ಸಿದರು. ಸಂಪುಟ ಸಭೆಯ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಯಾವ ಯಾವ ಇಲಾಖೆಗಳಿಗೆ ಇದು ಅನ್ವಯ ಎಂಬುದರ ಬಗ್ಗೆ ಇನ್ನೂ ನಿಯಮಾವಳಿ ರೂಪಿಸಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಲು ಸಚಿವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಈ ನಿಯಮ ಪಾಲನೆ ಯಿಂದ ಶಾಸಕರು ಬೇಸರಗೊಂಡಿರುವುದರಿಂದ ಶಾಸಕರೂ ಮಂಡಳಿಯ ಅಧ್ಯಕ್ಷರಾಗಲು ಅವಕಾಶ ದೊರೆಯುವಂತೆ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಮಾಧುಸ್ವಾಮಿ ಹೇಳಿದರು. ಕಲ್ಯಾಣ ಕರ್ನಾಟಕ ಮಂಡಳಿಗೆ ಆ ಭಾಗದ ಶಾಸಕರಲ್ಲದ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಅಧ್ಯಕ್ಷರನ್ನಾಗಿ ನೇಮಿ ಸಿದ್ದರಿಂದ ಆಕ್ಷೇಪಗಳು ಕೇಳಿ ಬಂದವು. ಹೀಗಾಗಿ ಶಾಸಕರನ್ನೂ ಅಧ್ಯಕ್ಷರನ್ನಾಗಿ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
Related Articles
– 2020ರ ನ. 3ರಿಂದ 5ರ ವರೆಗೆ ಬೆಂಗಳೂರಿನಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ
Advertisement
– ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರ ಗಳಲ್ಲಿ ಖಾಸಗಿ ಸಂಸ್ಥೆಗಳ ನೆರವಿನಿಂದ ಜಿಟಿಟಿಸಿ ತರಬೇತಿ ಕೇಂದ್ರಗಳನ್ನು ತೆರೆಯಲು ನಿರ್ಧಾರ, ಶೇ.90 ಖಾಸಗಿ ಸಂಸ್ಥೆಗಳು ಬಂಡವಾಳ ಹಾಕಲಿವೆ. 353 ಕೋಟಿ ರೂ. ಯೋಜನೆಗೆ ರಾಜ್ಯ ಸರಕಾರ 36 ಕೋಟಿ ರೂ. ನೀಡಲಿದೆ.
– ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಲ್ಲಿ ನೇಮಕಾತಿಯಲ್ಲಿ ನಿಯಮಗಳ ತಿದ್ದುಪಡಿಗೆ ಒಪ್ಪಿಗೆ
– ಯುವಜನ ಮತ್ತು ಕ್ರೀಡಾ ಇಲಾಖೆಯಿಂದ ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್, ಮಡಿಕೇರಿಯಲ್ಲಿ 12.5 ಕೋ.ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ಅಭಿವೃದ್ಧಿಗೆ ಒಪ್ಪಿಗೆ
– ಮಂಗಳೂರಿನ ವೆನಾಕ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ ಹಾಗೂ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನ.
– ಸಮಾಜ ಕಲ್ಯಾಣ ಇಲಾಖೆ ವತಿಯಿಂದ 20 ಸಂಚಾರಿ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿ ಗುಡ್ಡಗಾಡು ಪ್ರದೇಶಗಳಲ್ಲಿ ಬಳಕೆಗೆ ತೀರ್ಮಾನ.