ಬೆಂಗಳೂರು: ಬ್ಯಾಂಕ್ ಉದ್ಯೋಗಿಯೊಬ್ಬರು ಸಾಲ ತೀರಿಸಲಾಗದೇ ವಿಡಿಯೋ ಮಾಡಿ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿರುವ ಪ್ರಕರಣ ಅನ್ನಪೂಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮುದ್ದಿನಪಾಳ್ಯ ನಿವಾಸಿ ಭರತ್ ಎಂಬುವರು ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಸುಮಾರು 20 ಲಕ್ಷ ರೂ.ಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲದ ಕಂತು ಪಾವತಿಸಲು ಸಾಧ್ಯವಾಗದೇ ಮೊಬೈಲ್ನಲ್ಲಿ ವಿಡಿಯೋ ಮಾಡಿ ನಾಪತ್ತೆಯಾಗಿ ದ್ದಾರೆ. ವಿಡಿಯೋದಲ್ಲಿ “ನಾನು ನೊಂದು ಹೋಗಿದ್ದೇನೆ. ನನ್ನನ್ನು ಹುಡುಕಬೇಡಿ. ಮನೆ ಬಿಟ್ಟು ಹೋಗುತ್ತಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.
ಮೊಬೈಲ್ ಅನ್ನು ಮನೆಯಲ್ಲೇ ಇಟ್ಟು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಪತ್ನಿ ಗಮನಿಸಿದಾಗ ಪತಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಭರತ್ ಪತ್ನಿ ಅನ್ನಪೂಣೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿ ಪತಿಯನ್ನು ಪತ್ತೆ ಮಾಡುವಂತೆ ಮನವಿ ಮಾಡಿದ್ದಾರೆ. ಸಾಲಗಾರರು ಭರತ್ ಮನೆ ಬಳಿ ಬಂದು ಸಾಲ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ. ಬೈಕ್ನಲ್ಲಿ ಮನೆಯಿಂದ ಹೊರ ಹೋದ ಎರಡು ದಿನಗಳವರೆಗೆ ಯಾವುದೇ ಅನುಮಾನ ಬಾರದಂತೆ ಪತ್ನಿ ಜತೆ ತನ್ನ ಇನ್ನೊಂದು ಮೊಬೈಲ್ನಲ್ಲಿ ಭರತ್ ಮಾತ ನಾಡಿದ್ದರು. ಈಗ ಅವರ ಮತ್ತೂಂದು ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ ಎಂದು ತಿಳಿದು ಬಂದಿದೆ.