Advertisement

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

10:28 AM Nov 25, 2024 | Team Udayavani |

ಬೆಂಗಳೂರು: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ರಾಜಾ ಜಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ರಾಜಾಜಿನಗರದ ನಿವಾಸಿ ಲಕ್ಷ್ಮಣ್‌ (31) ಮೃತರು. ಲಕ್ಷ್ಮಣ್‌, ಬಿಬಿಎಂಪಿ ಕಸದ ಲಾರಿ ಚಾಲಕ ನಾಗಿದ್ದು, ಪೋಷಕರೊಂದಿಗೆ ರಾಜಾಜಿನಗರದಲ್ಲಿ ವಾಸವಾಗಿದ್ದ.

ಭಾನುವಾರ ಮಧ್ಯಾಹ್ನ ರಾಜಾಜಿ ನಗರದ ನವರಂಗ್‌ ಸಮೀಪದ ಪಾರ್ಕಿನಲ್ಲಿ ಮಲಗಿದ್ದ. ಈ ವೇಳೆ ಮರವೊಂದು ಏಕಾಏಕಿ ಆತನ ಮೇಲೆ ಬಿದ್ದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಸಾರ್ವಜನಿಕರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫ‌ಲಿಸದೆ ಸಂಜೆ ಲಕ್ಷ್ಮಣ್‌ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ಘಟನೆ ಸಂಬಂಧ ರಾಜಾಜಿನಗರ ಠಾಣೆಯಲ್ಲಿ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next