Advertisement
ಕವಿಸಂನಲ್ಲಿ ರವಿವಾರ ಚನ್ನವೀರಗೌಡ ಅಣ್ಣಾ ಪಾಟೀಲ ಸಂಸ್ಮರಣಾ ದತ್ತಿ ಹಾಗೂ ಟ್ರಸ್ಟ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಇತಿಹಾಸ ಅರಿಯದವರು ಇತಿಹಾಸ ಸೃಷ್ಟಿಸಲಾರರು. ಅಷ್ಟೇ ಅಲ್ಲ ಇತಿಹಾಸ ತಿರುಚುವ ಕೆಲಸ ನಡೆದು ಹೋಗಿದೆ. ಹೀಗಾಗಿ ಸರ್ಕಾರದ ವತಿಯಿಂದಲೇ ಧಾರವಾಡ ಸೇರಿದಂತೆ ನಾಡಿನ ಐತಿಹಾಸಿಕ ಸ್ಥಳಗಳ ವಿಚಾರ ತಿಳಿಸುವ ಗ್ರಂಥಗಳನ್ನು ಪ್ರಕಟಿಸುವ ಕಾರ್ಯಕ್ರಮವನ್ನು ಆಯವ್ಯಯದಲ್ಲಿ ಹಾಕಿಕೊಳ್ಳಲಾಗುವುದು. ಇತಿಹಾಸವನ್ನು ತಿರುಚುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದೆ ಇದು ಸರಿಯಲ್ಲ. ಸತ್ಯವನ್ನು ವಸ್ತುನಿಷ್ಠವಾಗಿ ದಾಖಲಿಸಬೇಕು ಎಂದರು.
Related Articles
ಅನುಮೋದನೆ ನೀಡಿದ್ದಾರೆ ಎಂದರು.
Advertisement
ಗ್ರಂಥ ಪರಿಚಯಿಸಿದ ಶಶಿಧರ ತೋಡಕರ್ ಅವರು, ಧಾರವಾಡದ ಚಾರಿತ್ರಿಕ ವ್ಯಕ್ತಿ ಚನ್ನವೀರಗೌಡ ಅಣ್ಣಾ ಪಾಟೀಲರು ಸರ್ಕಾರಿ ಎಂಜಿನಿಯರ್ ವೃತ್ತಿಯ ಜೊತೆಗೆ ಸಮಾಜಕ್ಕಾಗಿ ಮಹತ್ವದ ಕಾರ್ಯಗಳನ್ನು ಮಾಡಿದ್ದಾರೆ. ಪಿಬಿ ರಸ್ತೆ ನಿರ್ಮಾಣ, ಕೆಸಿಸಿ ಬ್ಯಾಂಕ್, ಎಲ್‌ಇಎ ಸ್ಥಾಪನೆಯಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಕೃಷಿ ವಿವಿ ಸ್ಥಾಪನೆಗೆ ಜಮೀನು ನೀಡಿದ ಕೊಡುಗೆಯೂ ಅಮೂಲ್ಯ ಎಂದು ಹೇಳಿದರು.ದತ್ತಿದಾನಿಗಳ ಪರವಾಗಿ ಮಹಾನಗರಪಾಲಿಕೆಮಾಜಿ ಸದಸ್ಯ ಸಿ.ಎಸ್. ಪಾಟೀಲ ಮಾತನಾಡಿದರು. ದೇವರಹುಬ್ಬಳ್ಳಿ ಸಿದ್ಧಾರೂಢ ಮಠದ ಶಿವಸಿದ್ಧಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು. ಕವಿಸಂ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಮಾಜಿ ಸಚಿವ ಶಶಿಕಾಂತ ನಾಯ್ಕ, ಮಾಜಿ ಶಾಸಕ ಎ.ಬಿ. ದೇಸಾಯಿ, ಗ್ರಂಥಕರ್ತೃ ಮಲ್ಲಿಕಾರ್ಜುನ ಪಾಟೀಲ, ಶಶಿಧರ ತೋಡಕರ್, ರೇಖಾ ಶೆಟ್ಟರ, ಬಿ.ವೈ. ಬಂಡಿವಡ್ಡರ, ಚಂದ್ರಗೌಡ ಎಸ್.ಪಾಟೀಲ, ಡಾ| ಅರವಿಂದ ಯಾಳಗಿ, ರಾಜು ಪಾಟೀಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕವಿಸಂ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಪ್ರಾಸ್ತಾವಿಕ ಮಾತನಾಡಿದರು. ಕೋಶಾಧ್ಯಕ್ಷ ಶಿವಾನಂದ ಭಾವಿಕಟ್ಟಿ ಆಶಯ ನುಡಿಗಳನ್ನಾಡಿದರು. ಸಹ ಕಾರ್ಯದರ್ಶಿ ಶಂಕರ ಕುಂಬಿ ನಿರೂಪಿಸಿದರು. ಚನ್ನವೀರಗೌಡರ ಕೊಡುಗೆ ದೊಡ್ಡದು
ಹಿರಿಯರನ್ನು ಸ್ಮರಿಸುವುದು ಸ್ಫೂರ್ತಿದಾಯಕವಾಗಿರುತ್ತದೆ. ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಸಿವಿಲ್ ಎಂಜಿನಿಯರ್ ಆಗಿದ್ದ ಚನ್ನವೀರಗೌಡ ಅಣ್ಣಾ ಪಾಟೀಲ ಅವರು ಧಾರವಾಡಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಲಿಂಗಾಯತ ಟೌನ್‌ಹಾಲ್, ವೀರಶೈವ ಮಹಾಸಭೆ, ಕೆಸಿಸಿ ಬ್ಯಾಂಕ್ ಸ್ಥಾಪನೆ, ಎನ್‌ಎಚ್ 4 ನಿರ್ಮಾಣ ಸೇರಿದಂತೆ ಹಲವು ಮಹತ್ವದ ಚಾರಿತ್ರಿಕ ಕಾರ್ಯಗಳನ್ನು ಅವರು ನಿರ್ವಹಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.