Advertisement
ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರನ್ನು ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಬೆಚ್ಚಿ ಬೀಳಿಸಿದೆ. ಈಗ ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಆಧರಿಸಿ, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Related Articles
Advertisement
‘ಕುಲಕರ್ಣಿ ಗಂಗೋತ್ರಿ ಕ್ಯಾಂಪಸ್‌ನಲ್ಲಿ ವಾಯು ವಿಹಾರದಲ್ಲಿದ್ದಾಗ ನಾನು ಎಂದಿನಂತೆ ಒಂದು ಜಾಗದಲ್ಲಿ ಕಾರು ನಿಲ್ಲಿಸಿಕೊಂಡು ಕಾಯುತ್ತಿದ್ದೆ. ಆದರೆ ಸುಮಾರು ಸಂಜೆ 5.45ರ ವೇಳೆಯಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಯಾರೋ ಒಬ್ಬರು ನೀವು ನಿತ್ಯ ಕರೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಯಾವುದೋ ವಾಹನ ಗುದ್ದಿಕೊಂಡು ಹೋಗಿದೆ ಎಂದು ತಿಳಿಸಿದರು. ನಾನು ತಕ್ಷಣ ಹೋಗಿ ಅವರನ್ನು ಆಸ್ಪತ್ರೆಗೆ ಕರೆತಂದಿದ್ದಾಗಿ’ ಕಾರು ಚಾಲಕ ನಿಂಗರಾಜು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಅಪಘಾತದ ಬಗ್ಗೆ ಸಾಕಷ್ಟು ಅನುಮಾನ ಮೂಡಿದೆ. ಕ್ಯಾಂಪಸ್‌ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ನೋಂದಣಿ ಸಂಖ್ಯೆ ಇಲ್ಲದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿರುವುದು ಕಂಡು ಬಂದಿದೆ. ಏಕಾಏಕಿ ಡಿಕ್ಕಿ ಹೊಡೆದ ಮೇಲೆ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದು, ಕೊಲೆ ಉದ್ದೇಶವೇ ಎಂಬ ಅನುಮಾನವನ್ನು ಪೊಲೀಸರಿಗೆ ಖಚಿತವಾಗಿದೆ.
ಕೊನೆಗೆ ರಸ್ತೆ ತಡೆಗೋಡೆಗೆ ಕಾರು ತರಚಿರುವುದು ಸಹ ಕಂಡು ಬಂದಿದೆ. ವಾಯುವಿಹಾರ ಮಾಡುತ್ತಿದ್ದುದು ಸಾರ್ವಜನಿಕ ರಸ್ತೆಯಲ್ಲಿ ಅಲ್ಲ. ಕೊಲೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂಬ ಅಂಶ ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಲತಃ ಹಾವೇರಿ ಜಿಲ್ಲೆ ಸವಣೂರಿನ ಕುಲಕರ್ಣಿ, 1963ರಲ್ಲಿ ಕೇಂದ್ರ ಸರಕಾರದ ಇಂಟೆಲಿಜೆನ್ಸ್ ಬ್ಯುರೋ ಸೇರ್ಪಡೆಗೊಂಡು ನಾನಾ ಹುದ್ದೆ ಹಾಗೂ ಸ್ಥಳಗಳಲ್ಲಿ ಮೂರೂವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಭಾರತೀಯ ರಾಜತಾಂತ್ರಿಕ ಕಾರ್ಯಗಳು, ಕಾರ್ಪೊರೇಟ್ ಕ್ಷೇತ್ರದಲ್ಲೂ ಕೆಲಸ ಮಾಡಿದ್ದರು. ವಾಯುಯಾನ ಸಂಶೋಧನಾ ಕೇಂದ್ರ (ಎಆರ್‌ಸಿ), ಕೇಂದ್ರ ಸರಕಾರದ ವಿದೇಶಿ ಇಂಟೆಲಿಜೆನ್ಸ್ ಏಜೆನ್ಸಿ ಸಂಶೋಧನೆ ಮತ್ತು ವಿಶ್ಲೇಷಣೆ ದಳ(ರಾ)ದಲ್ಲಿ, ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಮಾರ್ಕೆಟಿಂಗ್ ವಿಭಾಗದಲ್ಲಿ ವಿಜಿಲೆನ್ಸ್ ಚೀಫ್ ಆಗಿ ಕರ್ತವ್ಯ ನಿರ್ವಹಿಸಿದ್ದರು.