Advertisement

ಮುರಿದು ಬಿದ್ದ ಮಾತುಕತೆ ; BJPಗೆ ಗುಡ್ ಬೈ ಹೇಳಿದ ಜಗದೀಶ್ ಶೆಟ್ಟರ್

11:25 PM Apr 15, 2023 | Team Udayavani |

ಹುಬ್ಬಳ್ಳಿ : ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶನಿವಾರ ತಡರಾತ್ರಿ ಘೋಷಿಸಿದ್ದಾರೆ.

Advertisement

ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೆಟ್ಟರ್ ನಾಳೆ, ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಷಡ್ಯಂತ್ರ ನಡೆಯುತ್ತಿದೆ. ಅದರಲ್ಲಿ ಯಾರ ಕೈವಾಡ ಇದೆ ಎನ್ನುವುದನ್ನು ಈಗ ಹೇಳುವುದಿಲ್ಲ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ ಎಂದರು. ನನ್ನ ಅಂತಿಮ ನಿರ್ಧಾರ ನಾಳೆ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ . ಇನ್ನೊಂದೆಡೆ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನಲಾಗಿದ್ದು, ಕಾಂಗ್ರೆಸ್ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಇದುವರೆಗೂ ಘೋಷಿಸಿಲ್ಲ.

ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡು ಅಂತಿಮ ನಿರ್ಧಾರ ಕೈಗೊಳ್ಳುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ಮುಖಂಡರು ಅವರ ನಿವಾಸಕ್ಕೆ ದೌಡಾಯಿಸಿದ್ದರು. ಬದಾಮಿನಗರದಲ್ಲಿರುವ ಶೆಟ್ಟರ್ ನಿವಾಸಕ್ಕೆ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ‌ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗಮಿಸಿ ಮಾತುಕತೆ ನಡೆಸಿ ಮನವೊಲಿಸುವ ಯತ್ನ ಮಾಡಿದ್ದರು. ಆದರೆ ಮಾತುಕತೆ ಮುರಿದು ಬಿದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next