Advertisement

ಸುಟ್ಟು ಕರಕಲಾದ ಲಾರಿ

11:27 PM Mar 23, 2023 | Team Udayavani |

ಮಡಿಕೇರಿ: ಅನುಪಯುಕ್ತ ರಾಸಾಯನಿಕದ ಸರಕುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಗ್ನಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ಸಂಭವಿಸಿದೆ.

Advertisement

ಕೊಯಮತ್ತೂರಿನಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿದ್ದ ಲಾರಿ ಬುಧವಾರ ತಡರಾತ್ರಿ ಬೆಂಕಿಗೆ ಆಹುತಿಯಾಗಿದೆ. ಲಾರಿಯ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಚಾಲಕ ತತ್‌ಕ್ಷಣ ಕುಶಾಲನಗರದ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಿ ಲಾರಿಯಲ್ಲಿದ್ದ ದಾಖಲೆಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೊರಬಂದು ಸ್ಥಳೀಯರಿಗೆ ಮಾಹಿತಿ ನೀಡಿದರು.

ಸ್ಥಳೀಯರು ತತ್‌ಕ್ಷಣ ಪೊಲೀಸ್‌ ಠಾಣೆ ಮತ್ತು ಅಗ್ನಿಶಾಮಕ ತಂಡಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿ ರಾಸಾಯನಿಕ ವಸ್ತುಗಳಿಗೆ ತಗಲಿ ಅಪಾಯಕಾರಿ ಪರಿಸ್ಥಿತಿ ಸೃಷ್ಟಿಯಾಯಿತು.

ಸ್ಥಳೀಯ ಅಧಿಕಾರಿಗಳ ಕೋರಿಕೆ ಮೇರೆಗೆ ಪಿರಿಯಾಪಟ್ಟಣ ಭಾಗದಿಂದ ಆಗಮಿಸಿದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ಶಮನಗೊಳಿಸಲು ಪ್ರಯತ್ನಿಸಿದರು. ಮುಂಜಾನೆ 5 ಗಂಟೆಯ ವರೆಗೆ 2 ಅಗ್ನಿಶಾಮಕ ವಾಹನಗಳ ಸಹಕಾರದಿಂದ ಸಿಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪೊಲೀಸರು ಸ್ಥಳದಲ್ಲಿದ್ದು ಹೆದ್ದಾರಿ ವಾಹನ ಸಂಚಾರ ವ್ಯವಸ್ಥೆಗೆ ಅನುವು ಮಾಡಿಕೊಟ್ಟರು.
ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next