Advertisement

ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಲು ಕರೆ

02:06 PM Jul 15, 2019 | Team Udayavani |

ಬಾಗಲಕೋಟೆ: ಪ್ರತಿಯೊಬ್ಬರು ತಮ್ಮ ಪಾಲಿನ ಜಬಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.

Advertisement

ನಗರ ಬಿಆರ್‌ಸಿ ಕಚೇರಿಯಲ್ಲಿ ವಿಕಲಚೇತನ ನೌಕರರ ಸಂಘದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಚಿಕ್ಕೋಡಿಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿಯಾದ ಎಂ.ಜಿ. ದಾಸರ ಮತ್ತು ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ವಿಕಲಚೇತನ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ತುಕಾರಾಮ ಎಸ್‌.ಲಮಾಣಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಜೀವನದಲ್ಲಿ ತಮಗೆ ನೀಡಿದ ಜವಾಬ್ದಾರಿ ಸರಿಯಾದ ರೀತಿಯಲ್ಲಿ ಕೆಲಸ ಮಾಡಿದಾಗ ಮಾತ್ರ ಮಾಡಿದ ಕಾರ್ಯ ಶಾಶ್ವತವಾಗಿ ನೆನಪಿನಲ್ಲಿ ಇರಲು ಸಾಧ್ಯ. ಸಾರ್ವಜನಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿಕೊಟ್ಟಾಗ ಮಾತ್ರ ಉತ್ತಮ ಅಧಿಕಾರಿಯಾಗಲು ಸಾಧ್ಯ ಎಂದರು.

ನಿವೃತ್ತ ಉಪನಿರ್ದೇಶಕ ಎಂ.ಜಿ. ದಾಸರ ಮಾತನಾಡಿ, ಶಿಕ್ಷಕರ ವೃತ್ತಿಯು ಎಲ್ಲ ವೃತ್ತಿಗಿಂತ ಪವಿತ್ರವಾದ ವೃತ್ತಿಯಾಗಿದೆ. ವೃತ್ತಿಯ ಪಾವಿತ್ರತೆಯನ್ನು ಪ್ರತಿಯೊಬ್ಬ ಶಿಕ್ಷಕರು ಕಾಪಾಡಿಕೊಳ್ಳಬೇಕು. ಶಿಕ್ಷಣ ಕ್ಷೇತ್ರವು ಸದಾ ಬದಲಾವಣೆಯಾಗುವ ಕ್ಷೇತ್ರವಾಗಿದೆ ಎಂದರು.

ವಿಕಲಚೇತನ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ತುಕಾರಾಮ ಲಮಾಣಿ ಮಾತನಾಡಿ, ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

Advertisement

ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಬೆಳಗಲಿ, ಸಂಘದ ರಾಜ್ಯ ಖಜಾಂಚಿ ಮಂಜುನಾಥ ಹಿಂಡಿಹುಳಿ, ಕೊಪ್ಪಳ ತಾಲೂಕ ಅಧ್ಯಕ್ಷ ಅಂದಪ್ಪ ಇದ್ಲಿ, ಸಂಘದ ನಿರ್ದೇಶಕ ಅಶೋಕ ಕಂಚಗಾರ, ಜಾನಪದ ಪರಿಷತ್ತಿನ ಅಧ್ಯಕ್ಷ ಆನಂದ ಪೂಜಾರಿ, ಶಿಕ್ಷಕ ದೇವಪ್ಪ ಒಂಟಿಗಾರ, ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ಪರೀಟ, ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹುಲಸೂರ, ಹೊಳಿಬಸು ಚಿತ್ತರಗಿ ಉಪಸ್ಥಿತರಿದ್ದರು.

ಸಂಘದ ತಾಲೂಕ ಸಂಘಟನಾ ಕಾರ್ಯದರ್ಶಿ ಸಂಗಮೇಶ ಶಿರಗುಂಪಿ ಸ್ವಾಗತಿಸಿದರು. ಖಜಾಂಚಿ ಸುರೇಶ ಕಿಳ್ಯಾರ್‌ ನಿರೂಪಿಸಿದರು. ಡಿ.ಎಲ್. ರಾಠೊಡ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next