Advertisement

Hunsur; ಕಾರು-ಬಸ್ ಮುಖಾಮುಖಿ ಢಿಕ್ಕಿ: ಗ್ರಾ.ಪಂ.ಸದಸ್ಯ ದಾರುಣ ಸಾವು

10:08 PM Jun 11, 2023 | Team Udayavani |

ಹುಣಸೂರು: ಸಾರಿಗೆ ಸಂಸ್ಥೆ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ದಾರುಣವಾಗಿ ಮೃತಪಟ್ಟಿದ್ದರೆ, ಮೂವರು ತೀವ್ರಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ಭಾನುವಾರ ನಡೆದಿದೆ.

Advertisement

ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಲೇ.ಚಿಕ್ಕೇಗೌಡರ ಪುತ್ರ ಭಾಸ್ಕರ್(42)ಮೃತಪಟ್ಟವರು. ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ: ಮೃತ ಭಾಸ್ಕರ್ ತಮ್ಮ ಕಾರಿನಲ್ಲಿ ಕುಟುಂಬ ಸಮೇತ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಬಸ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟರೆ, ಕುಟುಂಬದವರಿಗೆ ತೀವ್ರಗಾಯಗಳಾಗಿದ್ದು, ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳನ್ನು ಗ್ರಾಮಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಹುಣಸೂರು ಬಸ್ ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಭೇಟಿ ನೀಡಿ ಪರಿಶೀಲಿಸಿದರು.

ಟ್ರಾಫಿಕ್ ಜಾಮ್:ಅಪಘಾತದ ನಂತರ ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿದ್ದರಿಂದ ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪೊಲೀಸರು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು

Advertisement

Udayavani is now on Telegram. Click here to join our channel and stay updated with the latest news.

Next