Advertisement

ತೆವಳಿಕೊಂಡು ರಸ್ತೆ ದಾಟುತ್ತಿದ್ದ ವಿಕಲಚೇತನರ ಮೇಲೆ ಹರಿದ ಕಾರು; ಚಿಕಿತ್ಸೆ ಫಲಿಸದೆ ಮೃತ್ಯು

12:22 PM Dec 16, 2023 | Team Udayavani |

ಕಡಬ: ತೆವಳಿಕೊಂಡು ರಸ್ತೆ ದಾಟುತ್ತಿದ್ದ ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದ ಪರಿಣಾಮ ಗಂಭೀರ ಗಾಯಗೊಂಡು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಡಬದ ಮುಖ್ಯ ಪೇಟೆಯಲ್ಲಿ ಡಿ.15ರ ಶುಕ್ರವಾರ ರಾತ್ರಿ ನಡೆದಿದೆ.

Advertisement

ಕಡಬದ ಅಂಗಡಿ ಮನೆ ನಿವಾಸಿ ಧರ್ಣಪ್ಪ ಮೃತಪಟ್ಟವರು.

ವಿಕಲಚೇತನರಾಗಿದ್ದ ಅವರು ಶುಕ್ರವಾರ ಸಾಯಂಕಾಲ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಮೃತರ ಸಹೋದರ ನೀಡಿದ ದೂರಿನಂತೆ ಕಾರು ಚಾಲಕನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next