ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ರಸ್ತೆಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಮೂವರು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಬೆಂಗಳೂರು-ಮoಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹೊಸಕ್ಕಿಪಾಳ್ಯ ಗೇಟ್ ಬಳಿ ಸಂಭವಿಸಿದೆ.
ಬೆoಗಳೂರಿನ ಬಸವನಗುಡಿ ವಾಸಿ ಎ.ಸೋಮಶೇಖರ್ ಪುತ್ರ ಎ.ಶಂಕರ್‌ಪ್ರಸಾದ್(20) ಮತ್ತು ಆಂಧ್ರಪ್ರದೇಶ ಮೂಲದ ಬೆಂಗಳೂರಿನ ಬಿಕಾಸಿಪುರ ವಾಸಿ ಸಿ.ಸಂಪಾಪತಿ ರಾವ್ ಪುತ್ರ ಸಿ.ಷಣ್ಮುಖ ಶ್ರೀನಿವಾಸ್(22) ಎಂಬುವರೇ ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಯುವಕರು. ಬೆಂಗಳೂರಿನ ಅಕ್ಷರ್ ಗೌಡ , ಬಾಬ್ ಚಂಗಪ್ಪ ಮತ್ತು ಅಭಿಲಾಷ ಎಂಬುವರೇ ಗಾಯಗೊಂಡು ತಾಲೂಕಿನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಸೋದರಳಿಯನ ಪ್ರಗತಿಗೆ ಶ್ರಮಿಸುತ್ತಿರುವ ಮಮತಾ ಬ್ಯಾನರ್ಜಿ ಇನ್ಮುಂದೆ ಏಕಾಂಗಿ: ಶಾ ಆಕ್ರೋಶ
ಕಳೆದೆರಡು ದಿನಗಳ ಹಿಂದೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪದಲ್ಲಿರುವ ಸ್ನೇಹಿತ ಬಾಬ್ ಚಂಗಪ್ಪ ಅವರ ಅಜ್ಜಿ ಮನೆಗೆ ಹೋಗಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ, ತಾಲೂಕಿನ ನೆಲ್ಲಿಗೆರೆ ಕ್ರಾಸ್ ಸಮೀಪದ ಹೊಸಕ್ಕಿಪಾಳ್ಯ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ರಸ್ತೆ ಬದಿಯ ಮರವೊಂದಕ್ಕೆ ಅಪ್ಪಳಿಸಿ ಈ ದುರ್ಘಟನೆ ನಡೆದಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಬೆಳ್ಳೂರು ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಸಾವನ್ನಪ್ಪಿದ ಎ.ಶಂಕರ್‌ಪ್ರಸಾದ್ ಮತ್ತು ಸಿ.ಷಣ್ಮುಖ ಶ್ರೀನಿವಾಸ್ ಅವರ ಮೃತದೇಹಗಳನ್ನು ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆದಿದ್ದ ಆರೋಗ್ಯ ಕಾರ್ಯಕರ್ತೆ ಸಾವು; ತೆಲಂಗಾಣದಲ್ಲಿ 3ನೇ ಪ್ರಕರಣ