ಕಾರ್ಕಳ: ಗಾಂಧಿ ಮೈದಾನ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ನಡೆಸುತ್ತಿದ್ದ ನಾಲ್ಕು ಮಂದಿ ವಿರುದ್ಧ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸರು ಸಾಣೂರು ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಕರ್ತವ್ಯ ಮುಗಿಸಿ ಸ್ವರಾಜ್ ಮೈದಾನದ ಬಳಿ ಬಂದಾಗ ಆರೋಪಿತರಾದ ನವನೀತ್ (33), ಪುನೀತ್ ಕುಮಾರ್ (35), ಶರತ್ ಕುಮಾರ್ (27) ಅಜಯ್ (25) ಅವರು ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯವನ್ನು ಸೇವಿಸುತ್ತಿದ್ದರು. ಅವರನ್ನು ವಿಚಾರಣೆ ನಡೆಸಿ ಮದ್ಯದ ಪ್ಯಾಕೆಟ್, ಪ್ಲಾಸ್ಟಿಕ್ ಲೋಟಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.