Advertisement

ಸಂಘಟನೆಗಳ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲು

10:54 PM Jan 10, 2020 | Team Udayavani |

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ದಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ್‌’ ಫ‌ಲಕ ಪ್ರದರ್ಶಿಸಿದ ಘಟನೆಗೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿ ಹಾಗೂ ನಾಲ್ಕೈದು ಸಂಘಟನೆ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಉಳಿದವರ ಪತ್ತೆ ಕಾರ್ಯ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಿವಿ ಆವರಣದಲ್ಲಿ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಲು ಸಾಧ್ಯವಿಲ್ಲ. ಯಾರೊಬ್ಬರೂ ತಮಗೆ ಹೇಗೆ ಬೇಕೋ ಹಾಗೆ ನಡೆದುಕೊಳ್ಳಲು ಸಾಧ್ಯವಿಲ್ಲ. ಸಂಬಂಧಪಟ್ಟವರು ತನಿಖೆ ನಡೆಸಿ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದರು. ಬೆಂಗಳೂರಿನ ಜ್ಯೋತಿ ನಿವಾಸ್‌ ಕಾಲೇಜು ಆವರಣದಲ್ಲಿ ಯಾವುದೇ ಘಟನೆ ನಡೆದಿಲ್ಲ. ಕಾಲೇಜಿನ ಹೊರಗೆ ಘಟನೆ ಸಂಭವಿಸಿದೆ.

ಕಾಲೇಜು ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಬಹುದು. ಈ ಬಗ್ಗೆ ಅನುಮತಿ ಪಡೆದಿತ್ತೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು. ಯುವ ಸಬಲೀಕರಣ ಕೇಂದ್ರಗಳಲ್ಲೂ ಸಿಎಎ, ಎನ್‌ಆರ್‌ಸಿ ಬಗ್ಗೆ ಮಾಹಿತಿ ನೀಡುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಶ್ವತ್ಥ ನಾರಾಯಣ, ಸದ್ಯ ಸಿಎಎ ವಿಚಾರ ಕುರಿತು ಚರ್ಚೆಯಾಗುತ್ತಿದ್ದು, ಆ ಬಗ್ಗೆಯೂ ವಿದ್ಯಾರ್ಥಿಗಳೊಂದಿಗೆ ವಿಚಾರ ಹಂಚಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next