Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಈಗಾ ಗಲೇ ಕೇಂದ್ರ ಸರಕಾರಕ್ಕೆ ವರದಿ ಕಳುಹಿ ಸಿದೆ. ಈ ಹಿನ್ನೆಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಬರ ಅಧ್ಯಯನ ತಂಡ ಗಳನ್ನು ಕಳುಹಿಸುವುದಾಗಿ ಕೇಂದ್ರ ಮಾಹಿತಿ ನೀಡಿದೆ. ಒಂದೆಡೆ ಅತಿವೃಷ್ಟಿ, ಮತ್ತೂಂದೆಡೆ ಅನಾವೃಷ್ಟಿ ಇದೆ. ಈಗಾಗಲೇ ಶೇ. 80ರಿಂದ 90ರಷ್ಟು ಬೆಳೆ ಹಾನಿ ಸಮೀಕ್ಷೆ ಆಗಿದೆ. ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣ ಗೊಂಡು ವರದಿ ಅಂತಿಮ ಗೊಳ್ಳಲಿದೆ. ಪ್ರಾಥಮಿಕ ವರದಿಯ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್‌ಗಳಲ್ಲಿ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸ ಲಾಗಿದೆ ಎಂದರು.
ಬೆಳೆ ವಿಮೆಗೆ ಈಗ ಖಾಸಗಿ ಕಂಪೆನಿಯೇ ಉಸ್ತುವಾರಿಯಾಗಿದ್ದು, ಬೆಳೆ ಹಾನಿಗೆ ತಕ್ಕ ಪರಿಹಾರ ದೊರಕುತ್ತಿಲ್ಲ ಎಂಬುದಾಗಿ ವ್ಯಾಪಕ ದೂರು ಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ಈ ಹಿಂದಿನಂತೆ ಸರಕಾರದಿಂದಲೇ ಬೆಳೆ ವಿಮೆ ನಿರ್ವಹಿಸಲು ಚಿಂತನೆ ನಡೆದಿದೆ. ಕೃಷಿ ಇಲಾಖೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಸೂಚಿಸಲಾಗಿದೆ. ಕೃಷಿ ಹೊಂಡ ನಿರ್ಮಾಣ ಯೋಜನೆ ಮತ್ತೆ ಜಾರಿಗೆ ತರಲಾಗಿದೆ. ರೈತರ ಮಕ್ಕಳಿಗೆ ನೀಡಲಾಗುವ ವಿದ್ಯಾನಿ ಧಿ ಮುಂದುವರಿಸಲಾಗಿದೆ. ಆದರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿ ಧಿ ಜತೆಗೆ ರಾಜ್ಯದಿಂದ ನೀಡಲಾಗುತ್ತಿದ್ದ 4 ಸಾವಿರ ರೂ.ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.
Related Articles
Advertisement