Advertisement
ಹೊಸಕೆರೆಹಳ್ಳಿ ಸಮೀಪದ ವೀರಭದ್ರನಗರದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಆರೋಪಿತ ತಾಯಿ ಶಾರೀನ್‌ಳನ್ನು ಗಿರಿನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ.
Related Articles
Advertisement
“ಕೆಟ್ಟಬುದ್ಧಿ ಕಲಿಯದಿರಲೆಂದು ಹೊಡೆದೆ’: ಪೊಲೀಸರ ವಿಚಾರಣೆಯಲ್ಲಿ “ತಂದೆಯ ರೀತಿ ಕೆಟ್ಟ ಬುದ್ಧಿ ಕಲಿಯದಿರಲಿ ಎಂದು, ನನ್ನ ಮಗುವಿಗೆ ಹೊಡೆದಿದ್ದೇನೆ. ಆದರೆ, ಕುಕ್ಕರ್‌ನಿಂದ ಮಗುವಿಗೆ ಹಲ್ಲೆ ಮಾಡಿಲ್ಲ. ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಇದೆ. ಅದಕ್ಕೂ ಚಿಕಿತ್ಸೆ ಕೊಡಿಸುತ್ತಿದ್ದೇನೆ. ನನಗೆ ಆರು ತಿಂಗಳಿಂದ ಕೆಲಸ ಇರಲಿಲ್ಲ. ಈಗ ಕೆಲಸ ಸಿಕ್ಕಿದೆ. ನನಗೆ ಯಾರು ಇಲ್ಲ. ಹೀಗಾಗಿ ಮಗುವನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದೆ. ಸಂಜೆ ಬೇಗ ಬಂದು ನೋಡಿಕೊಳ್ಳುತ್ತಿದ್ದೆ ಎಂದು ತಾಯಿ ಶಾರೀನ್ ಹೇಳಿಕೆ ನೀಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಸೂಚನೆ ಮೇರೆಗೆ ಎಫ್‌ಐಆರ್ ದಾಖಲು:
ಬೆಂಗಳೂರು: ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಮಗನಿಗೆ ಅಮಾನುಷವಾಗಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರ ಸೂಚನೆ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಹಲ್ಲೆಗೈದ ಶಾರೀನ್ ಎಂಬ ಮಹಿಳೆ ಮತ್ತು ಆಕೆಯ ಪ್ರಿಯಕರನ ವಿರುದ್ಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಹಲ್ಲೆಗೀ ಡಾದ ಮೂರುವರೆ ವರ್ಷದ ಸ್ಟಾಲಿನ್ ಎಂಬ ಮಗುವನ್ನು ರಕ್ಷಿಸಲಾಗಿದೆ.
ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಹತ್ತಿರದ ಡಾ. ಎಂ.ಎಚ್. ಮರೀಗೌಡ ರಸ್ತೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಆರ್. ನಾಗರತ್ನ ಹಾಗೂ ರಾಜೇಶ್ವರಿ ಅವರು ನೀಡಿದ ದೂರಿನ್ವಯ ಗಿರಿನಗರ ಪೊಲೀಸರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮಗುವಿನ ಮೇಲೆ ಕೃತ್ಯವೆಸಗಿರುವ ಶಾರಿನ್ ವಿರುದ್ಧ ಯಾವುದೇ ಕ್ರಮ ಆಗಿರಲಿಲ್ಲ. ಘಟನೆ ಕುರಿತಂತೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರು ಇದೊಂದು ಅಮಾನುಷ ಕೃತ್ಯವಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಇಲಾಖಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಆದೇಶದ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.