Advertisement
ಗ್ರಾಮದ ನಿವಾಸಿ ಮುನೀರ್ ಅವರ ಮಗು ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತತ್‌ಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಶಸ್ತ್ರ ಚಿಕಿತ್ಸೆಯ ಮೂಲಕ ಉಂಗುರವನ್ನು ಹೊರ ತೆಗೆಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮಗು ಮೃತಪಟ್ಟಿತು.