ಒತ್ತಾಯಿಸಿದ್ದಾರೆ. ಇದರೊಂದಿಗೆ, ನಗರ ಸ್ಥಳೀಯ ಸಂಸ್ಥೆಗಳಿಗೆ 11 ಸಾವಿರ ಪೌರಕಾರ್ಮಿಕರನ್ನು ನೇಮಿಸಿಕೊಳ್ಳುವಾಗ, ತಲೆ ತಲಾಂತರದಿಂದ ಈ ಕೆಲಸ ಮಾಡಿಕೊಂಡು ಬಂದಿರುವ ಕುಟುಂಬಗಳು ಮತ್ತು ಹಾಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಆದ್ಯತೆ ನೀಡಲು ನಿಯಮಾವಳಿ ತಿದ್ದುಪಡಿ ಮಾಡುವಂತೆಯೂ ಅವರು ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ಪೌರ ಕಾರ್ಮಿಕರಸಮಸ್ಯೆಗಳ ಕುರಿತಂತೆ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ ಮತ್ತು ಬಿಬಿಎಂಪಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 42 ಸಾವಿರ ಪೌರ ಕಾರ್ಮಿಕರಿದ್ದಾರೆ. ಪ್ರಸ್ತುತ ಪ್ರತಿ 700 ಮಂದಿಗೆ ಒಬ್ಬ ಪೌರಕಾರ್ಮಿಕ ಎಂಬ ನಿಯಮ ಜಾರಿಯಲ್ಲಿರುವ ಕಾರಣ ಎಂಟು ಸಾವಿರ ಮಂದಿ ಕೆಲಸ ಕಳೆದುಕೊಳ್ಳುವಆತಂಕದಲ್ಲಿದ್ದಾರೆ. ಹೀಗಾಗಿ ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಐಪಿಡಿ ಸಾಲಪ್ಪ ಅವರು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿದ್ದಾಗ ನೀಡಿದ್ದ ವರದಿ ಆಧರಿಸಿ 500 ಮಂದಿಗೆ ಒಬ್ಬ ಪೌರ ಕಾರ್ಮಿಕ ಎಂಬ ನಿಯಮ ರೂಪಿಸುವಂತೆ
ಸೂಚಿಸಿರುವುದಾಗಿ ತಿಳಿಸಿದರು. ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರ ಕಾರ್ಮಿಕರನ್ನುನೇಮಕ ಮಾಡಿಕೊಳ್ಳುವಾಗ, ಎರಡು ವರ್ಷ ಇದೇ ಕೆಲಸ ಮಾಡಿಕೊಂಡಿರುವ ಬಗ್ಗೆ ಇಎಸ್‌ಐ ಮತ್ತು nಪಿಎಫ್ ದಾಖಲೆಗಳನ್ನು ನೀಡಬೇಕು ಎಂಬ ನಿಯಮವನ್ನು ಸಡಿಲಗೊಳಿಸಬೇಕು. ಪೌರ ಕಾರ್ಮಿಕರ ನೇಮಕಾತಿಯಲ್ಲಿನ ಮೀಸಲಾತಿ ತೆಗೆದು
ಸಫಾಯಿ ಕರ್ಮಚಾರಿ ಸಮುದಾಯದವರಿಗೆ ಅವಕಾಶ ಮಾಡಿಕೊಡಬೇಕು. ರಾಜ್ಯಾದ್ಯಂತ ಪೌರ ಕಾರ್ಮಿಕರಾಗಿ ದುಡಿಯುತ್ತಿರುವವರ ಪೈಕಿ 22 ಸಾವಿರ ಮಂದಿಗೆ ಮನೆ ಇಲ್ಲ. ಹೀಗಾಗಿ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷದಲ್ಲಿ ಇವರೆಲ್ಲರಿಗೂ ಮನೆ ಒದಗಿಸುವಂತೆಯೂ ಸರ್ಕಾರಕ್ಕೆ ಶಿಫಾರಸು
ಮಾಡಲಾಗಿದೆ ಎಂದರು. ಭಂಗಿ ಸಮುದಾಯಕ್ಕೆ ಮನೆ ಕೊಡಿ: ಈ ಹಿಂದೆ ಮಲ ಹೊರುವ ಕೆಲಸ ಮಾಡುತ್ತಿದ್ದ ಭಂಗಿ ಸಮುದಾಯಕ್ಕೆ ಈವರೆಗೆ 3000 ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಹಕ್ಕುಪತ್ರ ನೀಡಿಲ್ಲ. ಇದೀಗ ಆ
ಎಲ್ಲಾ ಮನೆಗಳು ಶಿಥಿಲಗೊಂಡಿದ್ದು, ಹಕ್ಕುಪತ್ರ ಇಲ್ಲದೆ ಹೊಸ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗು ತ್ತಿಲ್ಲ. ಆದ್ದರಿಂದ ಅವರಿಗೆ ಹಕ್ಕುಪತ್ರ ನೀಡಿ ಮನೆ ಕಟ್ಟಿಕೊಳ್ಳ ಲು ಸಹಕರಿಸಬೇಕು ಎಂದು ಹೇಳಿದರು
Advertisement
ಸಿಬಿಐ ತನಿಖೆಗೆ ವಹಿಸಲು ಶಿಫಾರಸುಬಿಬಿಎಂಪಿ ವ್ಯಾಪ್ತಿಯಲ್ಲಿ ನಕಲಿ ಪೌರ ಕಾರ್ಮಿಕರ ನೇಮಕ ಮತ್ತು ಪೌರ ಕಾರ್ಮಿಕರ ಭವಿಷ್ಯನಿಧಿ ಹಗರಣಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಜಗದೀಶ್ ಹಿರೇಮನಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಅಕ್ರಮವಾಗಿ ಪೌರ
ಕಾರ್ಮಿಕರನ್ನು ನೇಮಿಸಿಕೊಳ್ಳುವ ಮೂಲಕ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು 550 ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ. ಅದೇ ರೀತಿ ಪೌರಕಾರ್ಮಿಕರ ಭವಿಷ್ಯನಿಧಿ ಹೆಸರಲ್ಲಿ 320 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಸರ್ಕಾರ ಎಸಿಬಿ ತನಿಖೆಗೆ ಆದೇಶಿಸಿತ್ತಾದರೂ ಅಧಿಕಾರಿಗಳು ಮತ್ತು ಗುತ್ತಿಗೆದಾರರು ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಲು ರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆಲಿಖೀತವಾಗಿ ಶಿಫಾರಸು ಮಾಡುವುದಾಗಿ
ಹೇಳಿದರು.