Advertisement
ನಗರದ ಬಿಬಿ ರಸ್ತೆಯಲ್ಲಿರುವ ಕರ್ನಾಟಕ ಪತ್ರಕರ್ತರ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಜಿಲ್ಲೆಯಲ್ಲಿ 10ಲಕ್ಷ ಜನಸಂಖ್ಯೆ ಇದೆ. ನಾಲ್ಕು ಸಾರ್ವಜನಿಕ ಆಸ್ಪತ್ರೆ, 50 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಈ ಪೈಕಿ 16 ಕೇಂದ್ರಗಳಲ್ಲಿ ದಿನದ 24 ತಾಸು ಕರ್ತವ್ಯ ನಿರ್ವಹಿಸಲಾಗುತ್ತಿದೆ. 1,320 ಗ್ರಾಮಗಳ ಪೈಕಿ 1230 ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರಗಳು ಇದ್ದು, ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಸಹಾಯಕರು ಮಾರಕ ರೋಗಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ ಎಂದು ಹೇಳಿದರು.
ಸ್ವಚ್ಛತೆಗೆ ಆದ್ಯತೆ ಅವಶ್ಯಕ: ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ, ಡೆಂ à ಹಾಗೂ ಚಿಕೂನ್‌ಗುನ್ಯ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಬೇಕು. ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ನೀರು ಇರುವ ಯಾವುದೇ ಪ್ಲಾಸ್ಟಿಕ್ ಬಕೆಟ್, ಡ್ರಂಗಳು, ಸಿಮೆಂಟ್ ತೊಟ್ಟಿಗಳನ್ನು ಸಂಪೂರ್ಣವಾಗಿ ಮುಚ್ಚಿರಬೇಕು.
ಸೊಳ್ಳೆಗಳ ಉತ್ಪತ್ತಿ ರೋಗಕ್ಕೆ ಕಾರಣವಾಗುತ್ತದೆ. ಇದರಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ತಮ್ಮ ಸುತ್ತಮುತ್ತಲು ಸ್ವಚ್ಛತೆಯಿಂದ ಪರಿಸರ ಕಾಪಾಡಿಕೊಳ್ಳಬೇಕು. ರೋಗ ಲಕ್ಷಣ ಇದ್ದ ರೋಗಿಗಳು ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವಂತೆ ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಪ್ರಭಾರಿ ಡಾ.ಶ್ರೀನಿವಾಸ್ ಮಾತನಾಡಿ, ಕುಟುಂಬ ಕಲ್ಯಾಣ ಯೋಜನೆಯಲ್ಲಿ ಜನಸಂಖ್ಯೆ ನಿಯಂತ್ರಣಕ್ಕಾಗಿ ಮಹಿಳೆಯರ ಮತ್ತು ಪುರುಷರ ಜವಾಬ್ದಾರಿ, ಮಹಿಳೆಯರು ಸಂತಾನ ಶಕ್ತಿಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡರೆ 600ರೂ., ಪುರುಷರಿಗೆ 1200 ನೀಡಲಾಗುತ್ತದೆ. ಒಂದು ವರ್ಷದಲ್ಲಿ 37 ಪುರುಷರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದರು.
ತಂಬಾಕು ನಿಯಂತ್ರಣ: ಜಿಲ್ಲಾ ತಂಬಾಕು ನಿಯಂತ್ರಣಾ ವ್ಯವಸ್ಥಾಪಕಿ ಡಾ.ವಿದ್ಯಾರಾಣಿ ಮಾತನಾಡಿ, ತಂಬಾಕು ನಿಯಂತ್ರಣಕ್ಕೆ ನಾಲ್ಕು ಸೆಕ್ಷನ್‌ಗಳು ಅತ್ಯಾವಶ್ಯಕವಾಗಿವೆ. ಅಂಗಡಿಗಳಲ್ಲಿ ಮಾರಾಟ ಮಾಡುವವರು ಸಾರ್ವಜನಿಕ ಸ್ಥಳದಲ್ಲಿ 60*45ಸೆ.ಮೀ.
ಇರುವ ಧೂಮಪಾನ ನಿಷೇಧಿತ ಪ್ರದೇಶ ಇಲ್ಲಿ ಧೂಮಪಾನ ಮಾಡುವುದು ಅಪರಾಧ ಉಲ್ಲಂಘನೆಯಾದಲ್ಲಿ ರೂ. 200ರವರೆಗೆ ದಂಡ ವಿಧಿಸಲಾಗುವುದು ಎಂಬ ಬೋರ್ಡ್‌ನ್ನು ಹಾಕತಕ್ಕದ್ದು, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಬಾರದು. ಮಾಡಿದರೆ ಹಲವಾರು ರೋಗ ರುಜಿನುಗಳಿಗೆ ಸಾರ್ವಜನಿಕರು ಹಾಗೂ ತಂಬಾಕು ಸೇವನೆ ಮಾಡುವವರು ತುತ್ತಾಗುತ್ತಾರೆ ಇದರಿಂದ ಮೊದಲು ಮುಕ್ತಿ ಹೊಂದಲು ಸಾರ್ವಜನಿಕರಿಗೆ ತಿಳಿವಳಿಕೆ ಅಗತ್ಯವಿದೆ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಂಡಿಬೆಲೆ ರಾಜಣ್ಣ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಕೇವಲ ಯೋಜನೆಗಳ ಮೂಲಕ ಕಾರ್ಯಕ್ರಮಗಳನ್ನು ರೂಪಿಸಿದರೆ ಸಾಲದು, ವೈದ್ಯಕೀಯ ಸೌಲಭ್ಯ ಹಾಗೂ ಅಗತ್ಯ ಸಿಬ್ಬಂದಿಗಳನ್ನು ನೀಡಬೇಕು ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಾಂತಲ, ಜಿಲ್ಲಾ ಮಾನಸಿಕ ತಜ್ಞರು ಡಾ.ಗಿರೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಜಿಲ್ಲಾ ಕಾಯಕಲ್ಪ ಕಾರ್ಯಕ್ರಮ ಅಧಿಕಾರಿ ಡಾ.ಗುಣಶೀಲ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಖಲೀಲ್ ಅಹಮ್ಮದ್, ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಎಂ.ರೇವಣ್ಣ, ಉಪ ಜಿಲ್ಲಾ ಆರೋಗ್ಯಾಧಿಕಾರಿ ಗೋವಿಂದರಾಜು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ಖಜಾಂಚಿ ಡಿ.ಕೆ.ಮಹೇಂದ್ರ ಕುಮಾರ್ ಇತರರಿದ್ದರು.