Advertisement

ಬಿಜೆಪಿಗೆ ಸ್ಪಷ್ಟ ಬಹುಮತ ಖಚಿತ: ಈಶ್ವರಪ್ಪ

01:35 PM Jul 04, 2017 | Team Udayavani |

ಹೊನ್ನಾಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ನಿಷ್ಕ್ರಿಯವಾಗಿದ್ದು, 2018ರ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಗಳಾಗುವುದು ನಿಶ್ಚಿತ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಪಟ್ಟಣದ ಗುರುಭವನದಲ್ಲಿ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪಂಡಿತ್‌ ದೀನದಯಾಳು ಉಪಾಧ್ಯಾಯರ ಜನ್ಮ ಶತಮಾನೋತ್ಸವ ವರ್ಷಾಚರಣೆ ಮತ್ತು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಮಾನಾಥ್‌ ಕೋವಿಂದ್‌ ಗೆಲುವಿಗೆ ಶುಭ ಹಾರೈಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಒಡಕಿನಿಂದ ಆಕಸ್ಮಿಕವಾಗಿ ಕಾಂಗ್ರೆಸ್‌ ಅ ಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಗಳಾದರು. ಈ 
ಬಾರಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿಯಿಂದ ಅಭ್ಯರ್ಥಿಯಾದವರು ಪಕ್ಷದ ಎಲ್ಲಾ ಕಾರ್ಯಕರ್ತರನ್ನು ಜೊತೆಗಿಟ್ಟುಕೊಂಡು ಗೆಲುವು ಸಾಧಿ ಸಬೇಕು ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಯಾರಿಗೂ ಟಿಕೆಟ್‌ ಪ್ರಕಟಣೆಯಾಗಿರುವುದಿಲ್ಲ. ಕೇಂದ್ರದ
ನಾಯಕರು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸು ಕಾರ್ಯ ಹಮ್ಮಿಕೊಂಡಿದ್ದಾರೆ. ಟಿಕೆಟ್‌ ಯಾರಿಗೇ ದೊರಕಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರದ ಎಲ್ಲಾ ಸಚಿವರು ಒಂದು ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸುತ್ತಿದ್ದಾರೆ. ನರೇಂದ್ರ ಮೋದಿಯವರ ಆಡಳಿತಕ್ಕೆ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಮಾತನಾಡಿ, ಈಗಾಗಲೇ ಕೆಲ ಮಾಜಿ ಸಚಿವರು ಟಿಕೆಟ್‌ ತಮಗೆ
ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಲು ಕೇವಲ ಒಂದು ಮತ ಸಾಕು ಎಂದು ಪರೋಕ್ಷವಾಗಿ ಮಾಜಿ ಸಚಿವ ರೇಣುಕಾಚಾರ್ಯ ಅವರಿಗೆ ಟಾಂಗ್‌ ಕೊಟ್ಟರು. ಮಾಜಿ ಸಚಿವ ಎಸ್‌.ಎ.ರವೀಂದ್ರಾಥ್‌
ಮಾತನಾಡಿ, ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿ ಆಯ್ಕೆ ನಡೆಯಬೇಕು. ಯಾವುದೇ ಕಾರಣಕ್ಕೂ ಪಕ್ಷದ ಅಭ್ಯರ್ಥಿ ಸೋಲದಂತೆ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು. 

ಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಹನುಮನಹಳ್ಳ ಬಸವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಡಾ|
ಶಿವಯೋಗಿಸ್ವಾಮಿ, ಬಸವರಾಜನಾಯ್ಕ, ಡಾ| ಡಿ.ಬಿ.ಗಂಗಪ್ಪ, ಕಾಡಾ ಮಾಜಿ ಅಧ್ಯಕ್ಷ ಗಿರೀಶ್‌ ಪಾಟೇಲ್‌, ಮುಖಂಡರಾದ ಎಸ್‌.ಎಂ.ವೀರೇಶ್‌, ಎಸ್‌.ಎಚ್‌.ನಾಗರಾಜ್‌, ಎ.ಬಿ.ಹನುಮಂತಪ್ಪ, ಸುರೇಶ್‌ ಬಿಸಾಟಿ, ಡಾ| ರಾಜಕುಮಾರ್‌, ಪಪಂ ಅಧ್ಯಕ್ಷೆ ಶ್ರೀದೇವಿ ಧರ್ಮಪ್ಪ, ಉಪಾಧ್ಯಕ್ಷೆ ವೀಣಾ ಸುರೇಶ್‌, ಅರಬಗಟ್ಟೆ ರಮೇಶ್‌ ಉಪಸ್ಥಿತರಿದ್ದರು. ತಾಲೂಕು ಬಿಜೆಪಿ ವತಿಯಿಂದ ಎಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ, ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜನಪ್ರತಿನಿಧಿಗಳ ಗೈರು ಎದ್ದು ಕಾಣುತ್ತಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next