Advertisement

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

08:01 PM May 16, 2024 | Team Udayavani |

ಪುತ್ತೂರು: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೇ 15 ರಂದು ರಾತ್ರಿ ಮೃತಪಟ್ಟ ಹಿನ್ನೆಲೆಯಲ್ಲಿ ಮೃತರ ಕಡೆಯ ನೂರಾರು ಮಂದಿ ಆಸ್ಪತ್ರೆಯಲ್ಲಿ ಜಮಾಯಿಸಿ ವೈದ್ಯರ ನಿರ್ಲ ಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿದ ಘಟನೆ ನಡೆದಿದೆ.

Advertisement

ಬಂಟ್ವಾಳ ತಾಲೂಕಿನ ಉಳಿಗ್ರಾಮದ ಪಿಲಿಬೈಲು ಕೃಷ್ಣಪ್ಪ(51) ಮೃತಪಟ್ಟವರು. ಘಟನೆ ಕುರಿತು ಸಹೋದರ ವಸಂತ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕೃಷ್ಣಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯ ಸಂದರ್ಭ ಮೃತಪಟ್ಟಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿರುವುದರಿಂದ ಅವರು ಮೃತಪಟ್ಟಿರಬಹುದು ಎಂಬ ಸಂಶಯವಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next