Advertisement
ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್ ಉಮಾಶಂಕರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್, ಎನ್.ಇ.ಕೆ.ಆರ್.ಟಿ.ಸಿಯ ವ್ಯವಸ್ಥಾಪಕ ನಿರ್ದೇಶಕ ಎಚ್.ಎಸ್ ಅಶೋಕ್ ಆನಂದ್, ಎನ್‌ಡಬು ಕೆಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಪಾಂಡುರಂಗ ಬೊಮ್ಮಯ್ಯ ನಾಯ್ಕ ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Related Articles
ಇದೇ ವೇಳೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಂಸ್ಥೆಗಳ ಬಳಕೆಗೆಂದು ಇತ್ತೀಚೆಗೆ ಸ್ವೀಡನ್ ದೇಶದ ಸ್ಕ್ಯಾನಿಯಾ ಹೆಸರಿನ 300ಕ್ಕೂ ಅಧಿಕ ಬಸ್‌ಗಳನ್ನು ಖರೀದಿಸಿರುವ ಪ್ರಕ್ರಿಯೆಗಳಲ್ಲೂ ಅವ್ಯವಹಾರ ನಡೆದಿದೆ. ಶೇ.75 ರಷ್ಟು ಪ್ರಮಾಣದ ಬಸ್‌ಗಳಲ್ಲಿ ಸಾಕಷ್ಟು ತೊಂದರೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಸಚಿವರು ಹಾಗೂ ಐವರು ಅಧಿಕಾರಿಗಳ ವಿರುದ್ಧ ಬಿ.ಗಣೇಶ್ ಸಿಂಗ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
Advertisement