ಗದಗ: ಆಸ್ತಿಯ ಖಾತಾ ಬದಲಾವಣೆ ಹಾಗೂ ಕಂಪ್ಯೂಟರ್ ಉತಾರ (ದಾಖಲೆ) ನೀಡಲು ಲಂಚ ಪಡೆಯುತ್ತಿದ್ದ ಪಟ್ಟಣ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಜಿಲ್ಲೆಯ ಶಿರಹಟ್ಟಿ ಪಟ್ಟಣ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ ಬಂಧಿತ ಆರೋಪಿ.
ಸ್ಥಳೀಯ ನಿವಾಸಿಯೊಬ್ಬರು ತಮ್ಮ ಆಸ್ತಿಯ ಖಾತಾ ಬದಲಾವಣೆ ಮಾಡಿ ಕಂಪ್ಯೂಟರ್ ಉತಾರ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಸಲ್ಲಿಸಿ ಹಲವು ತಿಂಗಳು ಕಳೆದರೂ, ಉತಾರ ಒದಗಿಸಿರಲಿಲ್ಲ. ಉತಾರ ನೀಡಲು 3.500 ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಕುರಿತು ಅರ್ಜಿದಾರನ ದೂರಿನ ಮೇರೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಆರೋಪಿ ಶರಣಪ್ಪ ಗೌಳಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ACB ಬೇಟೆ: ಲಕ್ಷಾಂತರ ರೂ. ಮೌಲ್ಯದ ಗರಿ ಗರಿ ನೋಟು, ಚಿನ್ನಾಭರಣ ಪತ್ತೆ
ಎಸಿಬಿ ಡಿವೈಎಸ್ಪಿ ಎನ್.ವಾಸುದೇವ ರಾಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಮಂಗಳೂರು: ಎಸಿಬಿ ದಾಳಿ ಅಂತ್ಯ; ಕೋಟ್ಯಾಂತರ ರೂಪಾಯಿ ಆಸ್ತಿ ಪತ್ತೆ ?