ಬಂಟ್ವಾಳ: ಪ್ರಧಾನಿ ಮೋದಿಯವರ ಬಲಿಷ್ಠ ನಾಯಕತ್ವದೊಂದಿಗೆ ದೇಶದಲ್ಲಿ ಹಲವು ಪರಿಣಾಮಕಾರಿ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಮುಂಬರುವ ಪಂಚಾಯತ್ ಚುನಾವಣೆಯಲ್ಲಿ
ಬಂಟ್ವಾಳದಲ್ಲಿ ಬಿಜೆಪಿಯ ಗೆಲುವಿಗೆ ನಾವೆಲ್ಲರೂ ಸಂಘಟಿತ ಪ್ರಯತ್ನ ಮಾಡಬೇಕಿದೆ ಎಂದು
ಶಾಸಕ ರಾಜೇಶ್ ನಾೖಕ್ ಹೇಳಿದರು.
ಶನಿವಾರ ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಬಂಟ್ವಾಳ ಕ್ಷೇತ್ರದ
ಬಿಜೆಪಿಯ ನೂತನ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಅವರು ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮಾತನಾಡಿ, ಪ್ರಸ್ತುತ ಬಿಜೆಪಿಯ ನೂತನ ಪದಾಧಿಕಾರಿಗಳಿಗೆ ಸಂಕ್ರಮಣ ಕಾಲ ಘಟ್ಟ. ಸಾಮಾನ್ಯ ಕಾರ್ಯಕರ್ತನೂ ಉನ್ನತ ಸ್ಥಾನಕ್ಕೇರಲು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ತನ್ನ ಅಧಿಕಾರಾವಧಿಯಲ್ಲಿ ಸಹಕರಿಸಿದವರಿಗೆ ಕೃತಜ್ಞತೆ ಅರ್ಪಿಸಿದರು. ನೂತನ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ ಎಲ್ಲರ ಸಹಕಾರ ಕೋರಿದರು.
ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಬಿಜೆಪಿ ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಸ್ವಾಗತಿಸಿದರು. ನೂತನ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ವಂದಿಸಿದರು. ಡೊಂಬಯ್ಯ ಅರಳ ಕಾರ್ಯಕ್ರಮ ನಿರ್ವಹಿಸಿದರು.