ಚಿಕ್ಕಮಗಳೂರು : ಮರಕ್ಕೆ ಕಾರು ಢಿಕ್ಕಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಭದ್ರಾವತಿಗೆ ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿಗಳು. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement
ಇದನ್ನೂ ಓದಿ: ಸೂಕ್ತ ಸಮಯಕ್ಕೆ ಖರೀದಿ ಕೇಂದ್ರ ತೆರೆಯಲು ಶಾಸಕ ದಿನೇಶ್ ಗೂಳಿಗೌಡ ಆಗ್ರಹ