ಕೆ.ಆರ್.ಪುರ: ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ್ದ ಅಪರಾಧಿಗೆ ತ್ವರಿತ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದೆ. ಮುರಳಿ(33) ಶಿಕ್ಷೆಗೆ ಒಳಗಾದ ಅಪರಾಧಿ.
ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ದೇವಸಂದ್ರ ಒಂದನೇ ಮುಖ್ಯ ರಸ್ತೆಯ ಗಣೇಶ ದೇವಸ್ಥಾನದ ಎದುರು ವಾಸವಾಗಿದ್ದ ತನ್ನ ಸ್ನೇಹಿತನ ಮನೆಗೆ ಮುರಳಿ ಆಗಾಗ ಹೋಗುತ್ತಿದ್ದ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸ್ನೇಹಿತನ ಮಗಳು ಅಪ್ರಾಪೆ¤ ಎಂದು ತಿಳಿದಿದ್ದರೂ ಆಕೆಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿ ಮಗುವಿನ ಜನನಕ್ಕೆ ಕಾರಣವಾಗಿದ್ದನು.
ಈ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆ ಪೂರ್ಣಗೊಳಿಸಿ ಇನ್ಸ್ಪೆಕ್ಟರ್ ಎಸ್.ಆರ್.ಮಂಜುನಾಥ್ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ಅಭಿಯೋಜಕ ಅನುರೇವು ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎನ್.ನರಸಮ್ಮ ಅವರು ಸಾಕ್ಷಿ ಮತ್ತು ಪುರಾವೆಗಳೊಂದಿಗೆ ರುಜುವಾತು ಪಡಿಸಿದ ಕಾರಣ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಅದೇಶ ನೀಡಿದ್ದಾರೆ.
ನ್ಯಾಯಾಲಯವು ತನ್ನ ತೀರ್ಪು ನೀಡುವ ಕಾಲಕ್ಕೆ ಸಂತ್ರಸ್ತಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅದೇಶ ಹೊರಡಿಸಿದ್ದಾರೆ