Advertisement

ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ? ಡಿಕೆಶಿ ಗೆ ಬಿಜೆಪಿ ಪ್ರಶ್ನೆ

10:16 AM Nov 17, 2020 | keerthan |

ಬೆಂಗಳೂರು: ರಾಜ್ಯದ ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ ಡಿ ಕೆ ಶಿವಕುಮಾರ್ ಅವರೇ ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನದ ಬಳಿಕ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಮಾಧ್ಯಮದ ಮೂಲಕ ‘ಡಿಕೆಶಿಯವರೇ ಈಗಲಾದರೂ ನನ್ನ ಪರವಾಗಿ ನಿಲ್ಲಿ’ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರೇ ಏನಾಗುತ್ತಿದೆ? ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ ಡಿ ಕೆ ಶಿವಕುಮಾರ್ ಅವರೇ ಎಂದು ಕೇಳಿದೆ.

ಕಾಂಗ್ರೆಸ್ ಎಗೈನ್ಸ್ಟ್ ದಲಿತ್ಸ್ ಎಂಬ ಹ್ಯಾಶ್ ಟ್ಯಾಗ್ ನಡಿ ಟ್ವೀಟ್ ಮಾಡಿರುವ ಬಿಜೆಪಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕಾಲದಿಂದಲೇ ಕಾಂಗ್ರೆಸ್ ಪಕ್ಷ ದಲಿತರ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯದಲ್ಲೂ ಅದರ ಮುಂದುವರೆದ ಭಾಗಗಳನ್ನು‌ ಸಿದ್ದರಾಮಯ್ಯ ಮಾಡಿ ತೋರಿಸಿದ್ದಾರೆ‌. ಹಿರಿಯ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಜಿ ಪರಮೇಶ್ವರ್ ಅವರ ಸೋಲುಗಳ ಹಿಂದೆ ಕಾಂಗ್ರೆಸ್ಸಿನ ದಲಿತ ವಿರೋಧಿ ನೀತಿಯಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ:ಡಿಜೆ ಹಳ್ಳಿ ಗಲಭೆ ಪ್ರಕರಣ: ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಬಂಧನ

ಕಳೆದ ಆಗಸ್ಟ್ ನಲ್ಲಿ ಪುಲಕೇಶೀ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಕಾಂಗ್ರೆಸ್ ನ ಸಂಪತ್ ರಾಜ್ ಅವರನ್ನು ಸೋಮವಾರ ಸಂಜೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಸಂಪತ್ ರಾಜ್ ಬಂಧನದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ನಮ್ಮ ಜೊತೆಯಿದ್ದಾರೆ. ಡಿ ಕೆ ಶಿವಕುಮಾರ್ ಅವರೇ ಇನ್ನಾದರೂ ನಮ್ಮ ಪರ ನಿಲ್ಲಿ ಎಂದು ಮನವಿ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next