ಚಿತ್ರದುರ್ಗ: ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಲಾಗಿದ್ದು, ಅಕ್ಟೋಬರ್ 2ರೊಳಗಾಗಿ ಬಹಿರ್ದೆಸೆ ಮುಕ್ತ ಗ್ರಾಮಗಳನ್ನು ಘೋಷಣೆ ಮಾಡಲಾಗುವುದು. ಬಾಕಿ ಇರುವ ಶೌಚಾಲಯಗಳ ನಿರ್ಮಾಣಕ್ಕೆ ಸೆಪ್ಟೆಂಬರ್ 9ರೊಳಗಾಗಿ ಮನೆಬಾಗಿಲಿಗೆ ಕಾರ್ಯಾದೇಶವನ್ನು ತಲುಪಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಾದ ಸಿದ್ದಾಪುರ, ಹೊಟ್ಟೆಪ್ಪನಹಳ್ಳಿ, ಲಕ್ಷ್ಮೀಪುರ ಮತ್ತು ಬುಡ್ನಹಟ್ಟಿ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 1,07,252
ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಬೇಕಾಗಿದ್ದು, ಈಗಾಗಲೇ 30,002 ಶೌಚಾಲಯ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಬಾಕಿ ಇರುವ 77,250 ಶೌಚಾಲಯಗಳ ನಿರ್ಮಾಣಕ್ಕೆ ಸೆ. 9ರೊಳಗಾಗಿ ಎಲ್ಲ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ನೀಡಲಾಗುತ್ತದೆ.
ಮನೆಬಾಗಿಲಿಗೆ ಶೌಚಾಲಯ ಕಾರ್ಯಾದೇಶ ಮತ್ತು “ನಮ್ಮ ನಡೆ ಸ್ವಚ್ಛತೆಯೆಡೆಗೆ’ ಎಂಬ ಗುರಿಯನ್ನಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.
ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸುವ ಗುರಿ ಹೊಂದಲಾಗಿದೆ. ಮೊದಲ ಹಂತವಾಗಿ ಗ್ರಾಮ ಮಟ್ಟ, ನಂತರ ಗ್ರಾಪಂ ಮತ್ತು ತಾಲೂಕು ಮಟ್ಟದಲ್ಲಿ ಬಯಲು ಬಹಿರ್ದೆಸೆ ಮುಕ್ತವಾಗಿಸಲಾಗುವುದು. ಅಂತಿಮವಾಗಿ ನವೆಂಬರ್ 16ರೊಳಗೆ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸು ಪ್ರಯತ್ನ ಮಾಡಲಾಗುತ್ತಿದೆ. ಶೌಚಾಲಯ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ಜಿಲ್ಲಾ ಪಂಚಾಯತ್‌ನಲ್ಲಿ 3 ಕೋಟಿ ರೂ. ಅನುದಾನ ಲಭ್ಯವಿದ್ದು, ಹೆಚ್ಚುವರಿ ಅನುದಾನದ ಅಗತ್ಯ ಇದ್ದಲ್ಲಿ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಹೇಳಿದರು.
ಪ್ರತಿಯೊಬ್ಬ ಫಲಾನುಭವಿಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 15 ಸಾವಿರ ರೂ. ಹಾಗೂ ಸಾಮಾನ್ಯ ವರ್ಗದವರಿಗೆ 12 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಈ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಕೋರಿದರು.
ನಗರಂಗೆರೆ ಗ್ರಾಪಂ ವ್ಯಾಪ್ತಿಯ ಸಿದ್ದಾಪುರ, ಲಕ್ಷ್ಮೀಪುರ, ಹೊಟ್ಟೆಪ್ಪನಹಳ್ಳಿ ಗ್ರಾಮಗಳ ಸುಮಾರು 200 ಜನರಿಗೆ ಮತ್ತು ಬುಡ್ನಹಟ್ಟಿಯಲ್ಲಿ 150 ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕೆ ಕಾರ್ಯಾದೇಶ ಪತ್ರ ನೀಡಲಾಯಿತು. ತಾಪಂ ಅಧ್ಯಕ್ಷ ವೀರೇಶ್, ಸದಸ್ಯರಾದ ಗಿರಿಯಪ್ಪ, ಜಿಪಂ
ಉಪ ಕಾರ್ಯದರ್ಶಿ ಬಸವರಾಜಪ್ಪ, ಕಾರ್ಯನಿರ್ವಾಹಕ ಅಧಿಕಾರಿ