Advertisement

ಮಾಜಿ ಸಚಿವ ಈಶ್ವರಪ್ಪ ಭೇಟಿಯಾದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ

11:29 AM Apr 16, 2022 | Team Udayavani |

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪರವರ ಶಿವಮೊಗ್ಗ ನಿವಾಸಕ್ಕೆ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದರು.

Advertisement

ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ (ರಿ) ಚಿತ್ರದುರ್ಗ, ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ, ಜಗದ್ಗುರು ಡಾ.ಶ್ರೀ ಶಾಂತವೀರ ಮಹಾಸ್ವಾಮಿಜಿ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ, ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಜಿ ಭೋವಿಗುರುಪೀಠ ಚಿತ್ರದುರ್ಗ, ಜಗದ್ಗುರು ಶ್ರೀ ಮಾದರಚನ್ನಯ್ಯ ಮಹಾಸ್ವಾಮಿಜಿ ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗ, ಜಗದ್ಗುರು ಶ್ರೀ ಪುರುಷೋತ್ತಮನಾಂದಪುರಿ ಮಹಾಸ್ವಾಮಿಜಿ ಭಗೀರಥ ಪೀಠ, ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ ಹೊಸದುರ್ಗ, ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಜಿ ನಾರಾಯಣ ಗುರುಪೀಠ ಶಿವಮೊಗ್ಗ ಮತ್ತು ಜಗದ್ಗುರು ಶ್ರೀ ಬಸವಮಾಚಿದೇವ ಮಹಾಸ್ವಾಮಿಜಿ ಮಡಿವಾಳ ಗುರುಪೀಠದ ಸ್ವಾಮೀಜಿಗಳು ನಿಯೋಗಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಬಹಳ ಶುದ್ಧ ಹಸ್ತದವರು ಯಾತ್ರೆಗೆ ಹೊರಟಿದ್ದಾರೆ: ಕಾಂಗ್ರೆಸ್ ಪ್ರವಾಸಕ್ಕೆ ಸಿಎಂ ವ್ಯಂಗ್ಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಕೇಳಿಬಂದ ಕಾರಣ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next