ಉಪ್ಪುಂದ: ಉದ್ಯೋಗ ಸಿಗದ ಕಾರಣಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 27ರಂದು ನಡೆದಿದೆ.
ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಉಡುಪಿ ಖಾಸಗಿ ಕಾಲೇಜಿನಲ್ಲಿ ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದಿದ್ದು ಆಕೆಗೆ ಉದ್ಯೋಗ ದೊರೆಯಲ್ಲಿಲ್ಲ.
ಈ ಕುರಿತು ಮನೆಯಲ್ಲಿ ಹೇಳಲು ಆಗದೇ ಮನನೊಂದು ಡೆತ್ ನೋಟ್ ಬರೆದು ಮೇ 27ರಂದು ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಅವರನ್ನು ಹಗ್ಗದಿಂದ ಬಿಡಿಸಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.