Advertisement

Fake Facebook Account: ಬಿಬಿಎಂಪಿ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್‌ ಖಾತೆ ನಕಲಿ

12:26 PM Oct 13, 2024 | Team Udayavani |

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ದುರ್ಬಳಕೆ ಮಾಡಲು ಯತ್ನಿಸಿರುವ ಕುರಿತು ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಈ ಕುರಿತು ಕೇಂದ್ರ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

Advertisement

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿದ್ದು, ಈ ಸಂಬಂಧ ದೂರುಗಳು ಬಂದ ಹಿನ್ನೆಲೆಯಲ್ಲಿ ಅ.11ರಂದು ಸಿಇಎನ್‌ ಪೊಲೀಸ್‌ ಠಾಣೆ(ಕೇಂದ್ರ ವಿಭಾಗ)ಯಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳ ವಂಚಕರು ತುಷಾರ್‌ ಗಿರಿನಾಥ್‌ ಅವರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರು ಪಯೋಗಪಡಿಸಿಕೊಂಡು ನಕಲಿ ಫೇಸ್‌ಬುಕ್‌ ಖಾತೆಯನ್ನು ತೆರೆದಿದ್ದರು. ಈ ಖಾತೆ ಮೂಲಕ ಪಾಲಿಕೆಯ ಅಧಿಕಾರಿ ಹಾಗೂ ನೌಕರರಿಗೆ ಮತ್ತು ಸಾರ್ವಜನಿಕರಿಗೆ ವಂಚಿಸುವ ಸಾಧ್ಯತೆ ಇರುವುದರಿಂದ ಈ ಫೇಸ್‌ಬುಕ್‌ ಖಾತೆಯನ್ನು ಡಿಲೀಟ್‌ ಮಾಡಿಸಿ, ವಂಚಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖೀಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next