Advertisement
ಮುಸಲ್ಮಾನರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತುಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸಿದರು. ಬಳಿಕ ಸಂಬಂಧಿಕರು- ಸ್ನೇಹಿತರ ಮನೆಗಳಿಗೆ ಸೌಹಾರ್ದ ಭೇಟಿ ನೀಡಿ ಶುಭಾಶಯ ಕೋರಿದರು.ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್ ಸಹಿತ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಸುರತ್ಕಲ್ ಮೊದಲಾದೆಡೆಗಳ ಮಸೀದಿಗಳಲ್ಲೂ ಸಾಮೂಹಿಕ ನಮಾಝ್, ಈದ್ ಖುತಾº ಮತ್ತು ಪ್ರವಚನಗಳು ನೆರವೇರಿದವು.
ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗಿ#ರತ್‌ಗಾಗಿ ಪ್ರಾರ್ಥಿಸಿದರು.
Related Articles
Advertisement
ಉಡುಪಿ ಜಾಮೀಯ ಮಸೀದಿ ಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ನಾಯರ್ ಕೆರೆಯ ಹಾಶಿಮಿ ಮಸೀದಿಯಲ್ಲಿ ಈದ್ ನಮಾಝ್ ನೇತೃತ್ವವನ್ನು ಮೌಲಾನಾ ಒಬೈದುರ್ ರೆಹಮಾನ್ ನದ್ವಿ ವಹಿಸಿದ್ದರು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರ ಜುಮಾ ಮಸೀದಿ ಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವ ದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೊಹಿದೀನ್ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ರೆಹಮ ತುಲ್ಲಾ ಕೋಲ್ಕರ್ ನದ್ವಿ ನೇತೃತ್ವದಲ್ಲಿ ನಮಾಝ್ ನಡೆಯಿತು.