ಮಂಗಳೂರು: ಬಿಜೈನಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ದೂಡಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ವಿದ್ಯಾರ್ಥಿಯು ಆತನ ಸ್ನೇಹಿತನ ಬಗ್ಗೆ, ಸ್ನೇಹಿತೆಯೊಂದಿಗೆ ಇನ್ಸ್ಟಾಗ್ರಾಂನಲ್ಲಿ ಪೋಕರಿ ಎಂದು ಮೆಸೇಜ್ ಮಾಡಿದ್ದ. ಇದನ್ನು ತಿಳಿದ ಸ್ನೇಹಿತ, ಕೇಳುವ ಸಲುವಾಗಿ ಹಾಗೂ ಇತರ ಮೂವರೊಂದಿಗೆ ಅಪಾರ್ಟ್ಮೆಂಟ್ಗೆ ತೆರಳಿದ್ದು, ಈ ವೇಳೆ ಇಬ್ಬರೂ ಪರಸ್ಪರ ದೂಡಾಡಿಕೊಂಡಿದ್ದಾರೆ.
ಇದನ್ನೂ ಓದಿ:ಸೌದಿ ಫುಟ್ಬಾಲ್ ಆಟದಲ್ಲಿ ರೊನಾಲ್ಡೊ- ಮೆಸ್ಸಿಗೆ ಶುಭಕೋರಿದ ಅಮಿತಾಭ್ ಬಚ್ಚನ್
ಘಟನೆಗೆ ಸಂಬಂಧಿಸಿ ಯಾವುದೇ ಕ್ರಮ ಕೈಗೊಳ್ಳುವುದು ಬೇಡ ಎಂದು ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ವಿದ್ಯಾರ್ಥಿಯ ತಂದೆ ಪೊಲೀಸರಿಗೆ ಲಿಖೀತವಾಗಿ ಹೇಳಿದ್ದಾರೆ. ಎಲ್ಲರೂ ಅಪ್ರಾಪ್ತ ವಯಸ್ಕರಾಗಿರುವುದರಿಂದ ಘಟನೆ ವರದಿಯನ್ನು ಬಾಲ ನ್ಯಾಯ ಮಂಡಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.